ಭಾರತೀಯ ಸೈನಿಕರಿಗೆ ಶುಭಕೋರಿದ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌

ಮೈಸೂರು: ಕದನ ವಿರಾಮ ಘೋಷಣೆಯಾದರೂ ಪಾಕ್‌ ತನ್ನ ನರಿ ಬುದ್ಧಿಯನ್ನು ಬಿಡದೇ ಭಾರತದ ಹಲವೆಡೆ ದಾಳಿ ಮಾಡಿರುವ ಬಗ್ಗೆ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಕಿಡಿಕಾರಿದ್ದಾರೆ.

ಮೈಸೂರಿನ ಹಾರ್ಡಿಂಜ್ ವೃತ್ತದ ಬಳಿ ಭಾರತೀಯ ಸೈನಿಕರ ಕಟೌಟ್‌ಗೆ ಈಡುಗಾಯಿ ಹೊಡೆದು ಜೈಕಾರ ಹಾಕಿದ ವಾಟಾಳ್‌ ನಾಗರಾಜ್‌ ಅವರು, ಭಾರತೀಯ ಸೈನಿಕರಿಗೆ ಶುಭ ಕೋರಿದರು.

ಈ ವೇಳೆ ಮಾತನಾಡಿದ ಅವರು, ಪದೇ ಪದೇ ಕಾಲು ಕೆರೆದುಕೊಂಡು ಬರುವ ಪಾಪಿ ಪಾಕಿಸ್ತಾನಕ್ಕೆ ನಮ್ಮ ಸೈನಿಕರು ತಕ್ಕ ಉತ್ತರವನ್ನು ಕೊಡುತ್ತಿದ್ದಾರೆ. ಕದನ ವಿರಾಮಕ್ಕೆ ಅಮೇರಿಕಾ ಮಧ್ಯಸ್ಥಿಕೆ ವಹಿಸಿ ಶಾಂತಿ ನೆಲೆಸಲು ಪ್ರಯತ್ನ ಮಾಡಿದೆ. ಆದರೂ ಪಾಕಿಸ್ತಾನ ಮತ್ತೆ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ. ಪರಿಣಾಮ ಪಾಕಿಸ್ತಾನಕ್ಕೆ ನಮ್ಮ ಸೇನೆ ದಿಟ್ಟ ಪ್ರತ್ಯುತ್ತರ ಕೊಡುತ್ತಿದೆ. ಈ ಹಿನ್ನೆಲೆಯಲ್ಲಿ ನಮ್ಮ ಭಾರತೀಯ ಸೈನಿಕರಿಗೆ ಮತ್ತು ಕೇಂದ್ರ ಸರ್ಕಾರಕ್ಕೆ ಅಭಿನಂದಿಸುತ್ತೇನೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

1 hour ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

1 hour ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

1 hour ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

1 hour ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

1 hour ago

ಆಸ್ತಿ ವಿವಾದ: ಸೋದರಳಿಯನ ಕೊಲೆಗೆ ಸುಪಾರಿ ಕೊಟ್ಟ ಮಾವ

ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…

1 hour ago