ಮೈಸೂರು ನಗರ

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ

ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ತನ್ನ ತಂದೆಯನ್ನು ಹೋಲಿಸಿ ಮಾತನಾಡಿರುವ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.

ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ನಾಲ್ವಡಿರವರ ಇತಿಹಾಸ ತಿಳಿಯದ ಯತೀಂದ್ರ ಸಿದ್ದರಾಮಯ್ಯ ಮಾತು ಕೇಳಿದರೆ ನಗು ಬರುತ್ತದೆ. ನಾಲ್ವಡಿ ಅವರಿಗಿಂತ ನಮ್ಮಪ್ಪನದೇ ಜಾಸ್ತಿ ಕೊಡುಗೆ ಮೈಸೂರಿಗೆ ಎಂದು ಹೇಳಿದ್ದಾರೆ. ಅವರಿಗೆ ಬಹುಶಃ ನಾಲ್ವಡಿರವರು ನಮ್ಮ ರಾಜ್ಯಕ್ಕೆ ನೀಡಿರುವ ನೂರಾರು ಕೊಡುಗೆಗಳು ತಿಳಿದಿಲ್ಲ. ಶಿಕ್ಷಣ, ನೀರಾವರಿ, ಕೈಗಾರಿಕೆ, ಕಾರ್ಖಾನೆಗಳು, ಪ್ರಜೆಗಳಿಗೆ ಸಾಮಾಜಿಕ ನ್ಯಾಯ ನೀಡಿ, ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ನಾಲ್ವಡಿರವರು ರಾಜ್ಯಕ್ಕೆ ನೀಡದ ಕೊಡುಗೆಗಳಿಲ್ಲ.

ನೂರಾರು ಜನ್ಮ ಎತ್ತಿದರೂ, ಯಾರೂ ನಾಲ್ವಡಿರವರ ಕಾಲಿನ ಧೂಳಿಗೂ ಸಮನಾಗಲ್ಲ. ಸಿದ್ದರಾಮಯ್ಯ ರಾಜಕೀಯದಲ್ಲಿ ಹಲವಾರು ಏಳು ಬೀಳುಗಳನ್ನು ಕಂಡು, ಪಕ್ಷಗಳನ್ನು ಬದಲಾವಣೆ ಮಾಡಿ, ರಾಜ್ಯದ ಜನರ ತೆರಿಗೆ ಹಣದಲ್ಲಿ ಐಷಾರಾಮಿ ಜೀವನ ನಡೆಸಿ, ಜನರ ಹಣದಲ್ಲಿ ಜನರಿಗೆ ಬಿಟ್ಟಿ ಭಾಗ್ಯಗಳನ್ನು ನೀಡುತ್ತಿದ್ದಾರೆಯೇ ಹೊರತು ಅವರ ಮನೆಯಿಂದ ಹಣವನ್ನು ತಂದು ರಾಜ್ಯವನ್ನು ಅಭಿವೃದ್ಧಿ ಮಾಡುತ್ತಿಲ್ಲ. ಮಹಾರಾಜರು ಕಟ್ಟಿಸಿದ ಮೈಸೂರು ಮೆಡಿಕಲ್ ಕಾಲೇಜು, ಕೆ.ಆರ್.ಆಸ್ಪತ್ರೆಗೆ ಸುಣ್ಣ ಬಣ್ಣವನ್ನು ಹೊಡಿಸಲು ಆಗಿಲ್ಲ.

ಕೇವಲ ತಮ್ಮ ರಾಜಕೀಯ ಪ್ರಚಾರಕ್ಕಾಗಿ, ಮನಬಂದಂತೆ ಹುಚ್ಚು ಹೇಳಿಕೆ ನೀಡುತ್ತಿರುವ ಯತೀಂದ್ರ ಸಿದ್ರಾಮಯ್ಯ ಈ ಕೂಡಲೇ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿದರು.

ಆಂದೋಲನ ಡೆಸ್ಕ್

Recent Posts

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ: ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…

2 hours ago

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ED ಶಾಕ್‌

ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…

3 hours ago

ಓದುಗರ ಪತ್ರ: ಬಂದೂಕು ಹಿಡಿದಿರುವ ನಾಯಕನ ಚಿತ್ರದ ಜಾಹೀರಾತಿಗೆ ‘ಇಲ್ಲೂ’ ಪ್ರೋತ್ಸಾಹ ಏಕೆ?

ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…

8 hours ago

ಓದುಗರ ಪತ್ರ: ಒಟಿಟಿ ವೇದಿಕೆಗಳು ಕನ್ನಡ ಭಾಷೆಗೂ ಆದ್ಯತೆ ನೀಡಲಿ

ಇಂದು ಒಟಿಟಿ ವೇದಿಕೆಗಳಾದ ಅಮೆಜನ್ ಪ್ರೈಮ, ನೆಟ್‌ಫ್ಲಿಕ್ಸ್, ಡಿಸ್ನಿ+ಹಾಟ್‌ಸ್ಟಾರ್, ಜೀ೫, ಸೋನಿಲಿವ್ ಮುಂತಾದವುಗಳು ನಮ್ಮ ಮನರಂಜನೆಯ ಅವಿಭಾಜ್ಯ ಅಂಗವಾಗಿವೆ. ಮನೆಯಲ್ಲಿಯೇ…

8 hours ago

ಓದುಗರ ಪತ್ರ: ಖಾಸಗಿ ಕಾಲೇಜುಗಳ ಅನಗತ್ಯ ಶುಲ್ಕ ಹೆಚ್ಚಳ ನಿಯಂತ್ರಿಸಿ

ರಾಜ್ಯದಲ್ಲಿ ಸರ್ಕಾರಿ ವಿಶ್ವವಿದ್ಯಾನಿಲಯಗಳ ಸಂಯೋಜಿತ ಕೆಲವು ಖಾಸಗಿ ಕಾಲೇಜುಗಳು ವರ್ಷದಿಂದ ವರ್ಷಕ್ಕೆ ಕಾಲೇಜು ಅಭಿವೃದ್ಧಿಯ ಹೆಸರಿನಲ್ಲಿ, ವಿಶ್ವವಿದ್ಯಾನಿಲಯದ ಸೂಚನೆ ಹೆಸರಿನಲ್ಲಿ…

8 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮೂರಡಿಯ ಮೂರ್ತಿಗೆ ಡಾಕ್ಟರಾದ ಕೀರ್ತಿ

ಕೋರ್ಟ್ ಮೆಟ್ಟಿಲು ಏರಿ ವೈದ್ಯಕೀಯ ಸೀಟು ಪಡೆದ ಸಾಹಸಿ ಗುಜರಾತಿನ ಭಾವನಗರದ ಗೋರ್ಕಿ ಗ್ರಾಮದ ಗಣೇಶ್ ಬರಯ್ಯ ಎಂಟು ಜನ…

8 hours ago