ಮೈಸೂರು ನಗರ

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ಪಿ ಶಿವರಾಜ್  ತಿಳಿಸಿದರು.

ಶುಕ್ರವಾರ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಒವೆಲ್ ಮೈದಾನದಲ್ಲಿ ಆಚರಣೆ ಮಾಡಲಾಗುವುದು. ಅಂದು ಬೆಳಗ್ಗೆ 8 ಗಂಟೆಗೆ ಅರಮನೆ ಆವರಣದಲ್ಲಿ ಇರುವ ಶ್ರೀ ಭುವನೇಶ್ವರಿ ದೇವಿಗೆ ಜಿಲ್ಲಾ ಉಸ್ತುವಾರಿ ಸಚಿವರು ಪೂಜೆ ಸಲ್ಲಿಸುವರು. ನಂತರ ಓವಲ್ ಮೈದಾನದಲ್ಲಿ ಸಚಿವರು ಬೆಳಗ್ಗೆ 9.00 ಗಂಟೆಗೆ ಧ್ವಜಾರೋಹಣ ನೆರವೇರಿಸುವರು ಎಂದು ಮಾಹಿತಿ ನೀಡಿದರು.

ಮೆರವಣಿಗೆಯು ಅರಮನೆ ಆವರಣದಿಂದ ಹೊರಟು ಕಾರ್ಯಕ್ರಮ ಸ್ಥಳಕ್ಕೆ ಬರುವುದು. ಮೆರವಣಿಗೆಯಲ್ಲಿ ಕಲಾತಂಡಗಳು ಭಾಗವಹಿಸುವವು. ಅಗತ್ಯ ಕಲಾ ತಂಡಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ನೋಡಿಕೊಳ್ಳುತ್ತದೆ. ಮೆರವಣಿಗೆಗೆ 6 ಸ್ಥಬ್ದ ಚಿತ್ರಗಳು ಭಾಗವಹಿಸುವವು ಎಂದು ತಿಳಿಸಿದರು.

ಆಹ್ವಾನ ಪತ್ರಿಕೆಯನ್ನು ಶಿಷ್ಟಾಚಾರ ಅನ್ವಯ ಮುದ್ರಿಸಿ ಜನಪ್ರತಿನಿಧಿಗಳು, ಗಣ್ಯರು ಹಾಗೂ ಸಂಘ ಸಂಸ್ಥೆಗಳಿಗೆ ವಿತರಿಸಲಾಗುವುದು. ಸಂಜೆ 6 ಗಂಟೆಗೆ ಕಲಾ ಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗುವುದು. ಪ್ರತಿಯೊಬ್ಬ ಸರ್ಕಾರಿ ಅಧಿಕಾರಿ ಹಾಗೂ ಸಿಬ್ಬದಿಗಳು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಕಳೆದ ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಯಲ್ಲಿ ಕನ್ನಡ ಭಾಷೆಯಲ್ಲಿ ಅತಿ ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಸಾಧನೆ ಮಾಡಿದ ಗೌರವಾನ್ವಿತರಿಗೆ ಸನ್ಮಾನ ಮಾಡಲಾಗುವುದು ಎಂದರು.

ಕನ್ನಡ ಸಂಘಟನೆಗಳ ಮುಖಂಡರು ಮಾತನಾಡಿ ಸಾಧಕರ ಆಯ್ಕೆಯಲ್ಲಿ ನಿರ್ದಿಷ್ಟ ಮಾನದಂಡ ಇಟ್ಟುಕೊಳ್ಳಬೇಕು. ಎಲ್ಲಾ ಸಂಘ ಸಂಸ್ಥೆಗಳವರಿಗೆ ಮುಖಂಡರಿಗೆ ಕನ್ನಡದ ಬ್ಯಾಡ್ಜ್ ಹಾಗೂ ಶಾಲು ನೀಡಬೇಕು. ಶೇಕಡಾ 60 ಕನ್ನಡ ಬಳಕೆ ಎಲ್ಲಾ ಕಡೆ ಆಗಬೇಕು. ಎಲ್ಲಾ ಅಂಗಡಿಗಳು ಹಾಗೂ ಮಳಿಗೆಗಳ ಬೋರ್ಡ್ ಗಳಲ್ಲಿ 60 ರಷ್ಟು ಕನ್ನಡ ಬಳಕೆ ಆಗಬೇಕು. ಸಾಧಕರ ಆಯ್ಕೆಯಲ್ಲಿ ಕ್ರೀಡಾ ಕ್ಷೇತ್ರದ ಸಾಧಕರನ್ನು ಹೊರತುಪಡಿಸಿ ಕನಿಷ್ಠ ವಯಸ್ಸನ್ನು ನಿಗದಿಪಡಿಸಬೇಕು. ಮರಗಳಿಗೆ ಪ್ಲೆಕ್ಸ್ ಹಾಗೂ ಬ್ಯಾನರ್ ಗಳನ್ನು ಅಳವಡಿಸುವುದನ್ನು ನಿಷೇಧಿಸಬೇಕು. ಅರಸು ರಸ್ತೆಯಲ್ಲಿ ಮೈಸೂರು ಟಾರ್ಪಲಿಯನ್ಸ್ ನವರು ದೊಡ್ಡದಾಗಿ ಬೋರ್ಡ್ ಹಾಕಿದ್ದಾರೆ. ಆದ್ದರಿಂದ ಏಕ ರೂಪ ಬೋರ್ಡ್ ವ್ಯವಸ್ಥೆ ಮಾಡಬೇಕು. ಮೈಸೂರು ಚಲನಚಿತ್ರ ಮಂದಿರಗಳಲ್ಲಿ ನವೆಂಬರ್ ಒಂದರಿಂದ ಒಂದು ವಾರಗಳ ಕಾಲ ಕನ್ನಡ ಚಲನಚಿತ್ರ ಪ್ರದರ್ಶನಗಳು ಆಗಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ ಕೆ ಹರೀಶ್, ಕನ್ನಡ ಸಂಘಟನೆಗಳ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

6 hours ago