ಮೈಸೂರು : ಬಂಧನ್ ಬ್ಯಾಂಕ್‌ನ ವಿದ್ಯಾರಣ್ಯಪುರಂ ಶಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ 30 ರಿಂದ 40ಜನ ಕನ್ನಡಿಗರನ್ನು ಏಕಾಏಕಿ ಕೆಲಸದಿಂದ ವಜಾ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗದ ವತಿಯಿಂದ ಜಿಲ್ಲಾಧಿಕಾರಿ ಹಳೆ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.
ಬಂಧನ್ ಬ್ಯಾಂಕ್ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಕನ್ನಡಿಗರನ್ನು ಯಾವುದೇ ಪೂರ್ವ ಮಾಹಿತಿ ನೀಡದೆ, ಕಾರಣ ಕೇಳಿ ನೋಟಿಸ್ ನೀಡದೆ ಕೆಲಸದಿಂದ ವಜಾ ಮಾಡಿ, ಬೇರೆ ರಾಜ್ಯದವರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದಾರೆ. ವಜಾಗೊಳಿಸಿ ಮೂರು ತಿಂಗಳಾದರೂ ಬಿಡುಗಡೆ ಪತ್ರ ನೀಡಿಲ್ಲ. ವಜಾಗೊಂಡ ನೌಕರರು ಬಿಡುಗಡೆ ಪತ್ರ ಕೇಳಲು ಹೋದಾಗ ಸರಿಯಾದ ರೀತಿಯಲ್ಲಿ ಸ್ಪಂದಿಸದೆ ಅಸಭ್ಯವಾಗಿ ವರ್ತಿಸಿದ್ದಾರೆ. ಹೀಗಾಗಿ ಬ್ಯಾಂಕ್‌ನವರು ಕ್ಷಮಾಪಣೆ ಕೇಳಬೇಕು. ವಜಾಗೊಂಡ ನೌಕರರಿಗೆ ಕೂಡಲೇ ಬಿಡುಗಡೆ ಪತ್ರ ನೀಡಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗದ ರಾಜ್ಯಾಧಕ್ಷ ಎಂ.ಲಿಂಗರಾಜು, ರಾಜ್ಯ ಪ್ರಧಾನ ಕಾರ್ಯದರ್ಶಿ ವಕೀಲ ಕೆ.ಆರ್.ಚರಣ್‌ರಾಜ್, ಉಪಧ್ಯಾಕ್ಷ ಮಲ್ಲೇಶ್, ಆನಂದ್‌ಕುಮಾರ್ ಗೌಡ, ಖಜಾಂಚಿ ಮಹದೇವ ಸ್ವಾಮಿ, ಮಹಿಳಾ ಘಟಕದ ಅಧ್ಯಕ್ಷರಾದ ಶ್ವೇತಾ, ನೇತ್ರಾವತಿ, ವಿನೋದ್, ಕರಿಯಪ್ಪ, ಪ್ರಕಾಶ್, ರವಿಕಿರಣ್, ಮಹದೇವು, ಉಷಾ, ಮಂಜುಳಾ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.





