ಮೈಸೂರು ನಗರ

ಬಂಧನ್‌ ಬ್ಯಾಂಕ್‌ನಲ್ಲಿ ಕನ್ನಡಿಗರ ವಜಾ : ಕರ್ನಾಟಕ ರಕ್ಷಣಾ ವೇದಿಕೆ ಖಂಡನೆ

ಮೈಸೂರು : ಬಂಧನ್ ಬ್ಯಾಂಕ್‌ನ ವಿದ್ಯಾರಣ್ಯಪುರಂ ಶಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ 30 ರಿಂದ 40ಜನ ಕನ್ನಡಿಗರನ್ನು ಏಕಾಏಕಿ ಕೆಲಸದಿಂದ ವಜಾ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗದ ವತಿಯಿಂದ ಜಿಲ್ಲಾಧಿಕಾರಿ ಹಳೆ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.

ಬಂಧನ್ ಬ್ಯಾಂಕ್ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಕನ್ನಡಿಗರನ್ನು ಯಾವುದೇ ಪೂರ್ವ ಮಾಹಿತಿ ನೀಡದೆ, ಕಾರಣ ಕೇಳಿ ನೋಟಿಸ್ ನೀಡದೆ ಕೆಲಸದಿಂದ ವಜಾ ಮಾಡಿ, ಬೇರೆ ರಾಜ್ಯದವರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದಾರೆ. ವಜಾಗೊಳಿಸಿ ಮೂರು ತಿಂಗಳಾದರೂ ಬಿಡುಗಡೆ ಪತ್ರ ನೀಡಿಲ್ಲ. ವಜಾಗೊಂಡ ನೌಕರರು ಬಿಡುಗಡೆ ಪತ್ರ ಕೇಳಲು ಹೋದಾಗ ಸರಿಯಾದ ರೀತಿಯಲ್ಲಿ ಸ್ಪಂದಿಸದೆ ಅಸಭ್ಯವಾಗಿ ವರ್ತಿಸಿದ್ದಾರೆ. ಹೀಗಾಗಿ ಬ್ಯಾಂಕ್‌ನವರು ಕ್ಷಮಾಪಣೆ ಕೇಳಬೇಕು. ವಜಾಗೊಂಡ ನೌಕರರಿಗೆ ಕೂಡಲೇ ಬಿಡುಗಡೆ ಪತ್ರ ನೀಡಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗದ ರಾಜ್ಯಾಧಕ್ಷ ಎಂ.ಲಿಂಗರಾಜು, ರಾಜ್ಯ ಪ್ರಧಾನ ಕಾರ್ಯದರ್ಶಿ ವಕೀಲ ಕೆ.ಆರ್.ಚರಣ್‌ರಾಜ್, ಉಪಧ್ಯಾಕ್ಷ ಮಲ್ಲೇಶ್, ಆನಂದ್‌ಕುಮಾರ್ ಗೌಡ, ಖಜಾಂಚಿ ಮಹದೇವ ಸ್ವಾಮಿ, ಮಹಿಳಾ ಘಟಕದ ಅಧ್ಯಕ್ಷರಾದ ಶ್ವೇತಾ, ನೇತ್ರಾವತಿ, ವಿನೋದ್, ಕರಿಯಪ್ಪ, ಪ್ರಕಾಶ್, ರವಿಕಿರಣ್, ಮಹದೇವು, ಉಷಾ, ಮಂಜುಳಾ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

4 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

4 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

4 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

4 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

4 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

6 hours ago