ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು
ಕೆ.ಆರ್.ನಗರ: ನಾಡಿನ ಸುಪ್ರಸಿದ್ಧ ಶ್ರೀ ಕಪ್ಪಡಿ ಜಾತ್ರೆಯಲ್ಲಿ ೨ನೇ ಬಾರಿ ೨೦ ಜೊತೆ ನಾಡಕುಸ್ತಿ ಪಂದ್ಯಾವಳಿಗೆ ಶ್ರೀ ಕ್ಷೇತ್ರ ಕಪ್ಪಡಿ ಮಠಾಧಿಪತಿಗಳಾದ ಪರಮಪೂಜ್ಯ ಎಂ.ಎಲ್. ವರ್ಚಸ್ವಿ ಶ್ರೀಕಂಠ ಸಿದ್ದಲಿಂಗರಾಜೇ ಅರಸ್ ಸ್ವಾಮೀಜಿ ಅವರು ಚಾಲನೆ ನೀಡಿದರು
ಬಳಿಕ ಮಾತನಾಡಿದ ಸ್ವಾಮೀಜಿ ಅವರು, ಕುಸ್ತಿ ಎಂಬುದು ಕೇವಲ ಕ್ರೀಡೆಯಲ್ಲ. ಅದು ನಮ್ಮ ಸಂಸ್ಕೃತಿ, ಪರಂಪರೆಯ ಭಾಗವಾಗಿದ್ದು, ದೈಹಿಕ ಸಾಮರ್ಥ್ಯ ಹಾಗೂ ಮಾನಸಿಕ ದೃಢತೆಗೆ ಪ್ರೇರಣೆಯಾಗುತ್ತದೆ. ಶಿಸ್ತು, ಸಾಹಸ ಮತ್ತು ಆತ್ಮವಿಶ್ವಾಸವನ್ನು ಬೆಳೆಸುತ್ತದೆ. ಗ್ರಾಮೀಣ ಕ್ರೀಡೆ ಮತ್ತು ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ಕುಸ್ತಿ ಆಯೋಜಿಸಲಾಗುತ್ತಿದೆ. ಸ್ಥಳೀಯ ಕುಸ್ತಿಪಟುಗಳಲ್ಲದೇ ಹೊರ ರಾಜ್ಯಗಳಿಂದಲೂ ಆಟಗಾರರು ಆಗಮಿಸುತ್ತಿರುವುದು ಸಂತೋಷ ತಂದಿದೆ ಎಂದರು.
ಕುಸ್ತಿ ಪಂದ್ಯಾವಳಿ ಪ್ರೇಕ್ಷಕರಿಗೆ ರಸದೌತಣ ನೀಡಿದವು. ಸಿಳ್ಳೆ, ಚಪ್ಪಾಳೆಗಳ ಮೂಲಕ ಕುಸ್ತಿ ಪಟುಗಳಿಗೆ ಪ್ರೋತ್ಸಾಹ ದೊರೆಯಿತು.





