ಮೈಸೂರು ನಗರ

ಆಕಾಶ, ಭೂಮಿ ಒಂದಾದರೂ ಸರಿ ಮಾರ್ಚ್.‌22ಕ್ಕೆ ಕರ್ನಾಟಕ ಬಂದ್‌ ಆಗೇ ಆಗುತ್ತದೆ: ವಾಟಾಳ್‌ ನಾಗರಾಜ್‌

ಮೈಸೂರು: ಆಕಾಶ, ಭೂಮಿ ಒಂದಾದರೂ ಸರಿ ಮಾರ್ಚ್.22ರಂದು ಕರೆ ನೀಡಿರುವ ಅಖಂಡ ಕರ್ನಾಟಕ ಬಂದ್ ಅನ್ನು ಮಾಡೇ ಮಾಡಲಾಗುತ್ತದೆ ಎಂದು ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ಬೆಳಗಾವಿ ಗಡಿಯಲ್ಲಿ ಎಂಇಎಸ್ ಕಾರ್ಯಕರ್ತರ ದೌರ್ಜನ್ಯ ಖಂಡಿಸಿ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿ ನಾಡು, ಕನ್ನಡ ಹಾಗೂ ಕನ್ನಡಿಗರ ಶಕ್ತಿಯು ಅಖಂಡ ಕರ್ನಾಟಕವನ್ನು ಬಂದ್ ಮಾಡುವ ಮೂಲಕ ಪ್ರದರ್ಶನವಾಗಬೇಕು. ಕನ್ನಡಿಗರ ಶಕ್ತಿ ದೇಶಕ್ಕೆ ಗೊತ್ತಾಗಬೇಕು ಎಂದರೆ ಮಾ.22ರಂದು ಕರ್ನಾಟಕ ಸಂಪೂರ್ಣ ಬಂದ್ ಆಗಬೇಕು ಎಂದು ಒತ್ತಾಯಿಸಿದರು.

ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕ ಭಾಗದ ಜಿಲ್ಲೆಗಳು ಅಭಿವೃದ್ಧಿಯಾಗಬೇಕಾಗಿದೆ. ಕೇಂದ್ರ ಸರ್ಕಾರವು ರಾಜ್ಯವನ್ನು ಕಡೆಗಣಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಎಂದೆಂದೂ ಕಂಡಿರದ ಬಂದ್ ಆಗಬೇಕು. ಈಗಾಗಲೇ ೧೯೦೦ಕ್ಕೂ ಹೆಚ್ಚು ಕನ್ನಡಪರ ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ. ಈ ಬಂದ್ ಕನ್ನಡಿಗರಿಗಾಗಿ ನಡೆಯುತ್ತಿರುವ ಬಂದ್ ಎಂದರು.

ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಕೂಡ ಕೊನೆ ಕ್ಷಣದಲ್ಲಿ ಬೆಂಬಲ ಸೂಚಿಸುತ್ತಾರೆ. ನಾರಾಯಣಗೌಡರ ಬಗ್ಗೆ ನಮಗೆ ಗೌರವ ಇದೆ. ಅವರ ಜೊತೆಯೂ ಕೂಡ ಮಾತನಾಡುತ್ತೇವೆ. ಬಂದ್‌ಗೆ ಯಾರು ಕೂಡ ವಿರೋಧ ಮಾಡುವುದಿಲ್ಲ ಎಂದು ವಾಟಾಳ್ ವಿಶ್ವಾಸ ವ್ಯಕ್ತಪಡಿಸಿದರು.

ಕೆಲವರು ಬಂದ್ ಬಗ್ಗೆ ವ್ಯತಿರಿಕ್ತವಾಗಿ ಮಾತನಾಡುತ್ತಾರೆ. ಅವರು ಅವಿವೇಕಿಗಳು. ಕನ್ನಡಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡುವ ಭಾವನೆ ಇರಬೇಕು. ವಿದ್ಯಾರ್ಥಿಗಳು ಎಲ್ಲಾ ತ್ಯಾಗಕ್ಕೂ ಸಿದ್ಧರಾಗಬೇಕು ಎಂದರು.

ಎಂಇಎಸ್ ದೌರ್ಜನ್ಯ ಖಂಡಿಸಿ ಹಾಗೂ ಸಾರಿಗೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸೋಮವಾರ ಬೆಂಗಳೂರಿನಲ್ಲಿ ರಾಜಭವನ ಮುತ್ತಿಗೆ ಹಾಕುತ್ತೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

2 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

2 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

2 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

3 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

3 hours ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

3 hours ago