ಮೈಸೂರು: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ್ಲಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದ ಕನ್ನಡ ಪರ ಸಂಘಟನೆಗಳ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಬಸ್‌ಗಳಿಗೆ ಅಡ್ಡಲಾಗಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಬಸ್‌ಗಳು ಸಂಚರಿಸಲು ಸಾಧ್ಯವಾಗದ ರೀತಿಯಲ್ಲಿ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು.
ಈ ಹಿನ್ನೆಲೆಯಲ್ಲಿ ಕೇಂದ್ರೀಯ ಬಸ್ ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರತಿಭಟನಾಕಾರರನ್ನು ಬಂಧಿಸಿದ ಬಳಿಕ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ವ್ಯವಸ್ಥೆ ಸಹಜ ಸ್ಥಿತಿಗೆ ಮರಳಿದೆ.





