ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ನವೆಂಬರ್ 25ರ ಬೆಳಿಗ್ಗೆ 11 ಗಂಟೆಗೆ ಕೇಂದ್ರದ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿರುವ 30 ದಿನಗಳ ಕೆಎಎಸ್ ಪರೀಕ್ಷಾ ತರಬೇತಿ ಶಿಬಿರದ ಉದ್ಘಾಟನೆಯನ್ನು ಚಾಮರಾಜನಗರದ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಉದ್ಘಾಟಿಸಿ ಅಭ್ಯರ್ಥಿಗಳಿಗೆ ಶುಭಹಾರೈಸುವರು.
ಕರ್ನಾಟಕ ಸರ್ಕಾರದ ಹಣಕಾಸು ಇಲಾಖೆ ಉಪ ಯೋಜನಾ ನಿರ್ದೇಶಕ 2021ನೇ ಬ್ಯಾಚ್ ನ ಐಎಎಸ್ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೇರ್ ಪರೀಕ್ಷಾ ಸಿದ್ಧತೆ ಕುರಿತು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡಿ ಸಂವಾದ ನಡೆಸುವರು. 2005 ನೇ ಸಾಲಿನ ಕೆಎಎಸ್ ಅಧಿಕಾರಿ ಮೈಸೂರು ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಪರೀಕ್ಷಾ ಟಿಪ್ಸ್ ನೀಡುವರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅಧ್ಯಕ್ಷತೆ ವಹಿಸುವರು. ಕುಲಸಚಿವ ಪ್ರೊ. ಕೆ.ಬಿ. ಪ್ರವೀಣ ಉಪಸ್ಥಿತರಿರುವರು. ತರಬೇತಿಗೆ ಸೇರಬಯಸುವ ಆಸಕ್ತರು ಈಗಲೂ ಪ್ರವೇಶಾತಿ ಪಡೆಯಬಹುದೆಂದು ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ: 0821-2515944/9964760090 ನ್ನು ಸಂಪರ್ಕಿಸಬಹುದಾಗಿದೆ.
ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…
ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…
ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…
ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದರು ಎಂಬ…
ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…
ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…