ಮೈಸೂರು: ಇದೇ ನವೆಂಬರ್.20ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೌದಿ ಏಕವ್ಯಕ್ತಿ ನಾಟಕದ 50ನೇ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಕದಂಬ ರಂಗ ವೇದಿಕೆ ಅಧ್ಯಕ್ಷ ರಾಜಶೇಖರ ಕದಂಬ ತಿಳಿಸಿದರು.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪತ್ರಕರ್ತ, ಲೇಖಕ ಗಣೇಶ ಅಮೀನಗಡ ಅವರ ಬಂಗಾರದ ಮನುಷ್ಯ ನಾಟಕದ ಕೃತಿ ಬಿಡುಗಡೆ ಹಾಗೂ ಅವರ ರಚನೆಯ ಕೌದಿ ಏಕವ್ಯಕ್ತಿ ನಾಟಕದ 50ನೇ ಪ್ರದರ್ಶನವನ್ನು ನವೆಂಬರ್.20ರಂದು ಸಂಜೆ 6.30ಕ್ಕೆ ನಗರದ ಕಲಾಮಂದಿರದ ಪಕ್ಕದ ಕಿರು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಇದನ್ನು ಓದಿ: ಆನ್‌ಲೈನ್ ಗೇಮಿಂಗ್ ಕಂಪನಿಗಳ ಮೇಲೆ ಇಡಿ ದಾಳಿ
ಟಿ.ಕೆ.ರಾಮರಾವ್ ಅವರ ಕಾದಂಬರಿ ಆಧರಿಸಿ ಬಂಗಾರದ ಮನುಷ್ಯ ನಾಟಕವಾಗಿ ಗಣೇಶ ಅಮೀನಗಡ ರಚಿಸಿದ್ದಾರೆ. ಇದನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಬಿಡುಗಡೆಗೊಳಿಸಲಿದ್ದಾರೆ. ಕೃತಿಯನ್ನು ಲೇಖಕ ಡಾ.ಎನ್.ಎಂ.ಗಿರಿಜಾಪತಿ ಪರಿಚಯಿಸುವರು ಎಂದು ಹೇಳಿದರು.
ಪುಸ್ತಕ ಬಿಡುಗಡೆ ನಂತರ ಕೌದಿ ನಾಟಕ ಪ್ರದರ್ಶನಗೊಳ್ಳಲಿದೆ. ಮೈಸೂರಿನಲ್ಲಿ ಮೊದಲ ಬಾರಿಗೆ ನಾಟಕ ಪ್ರದರ್ಶನಗೊಳ್ಳಲಿದೆ. ಒಂದು ಗಂಟೆ ಅವಧಿಯ ಈ ನಾಟಕವನ್ನು ಕಲಬುರ್ಗಿಯ ಭಾಗ್ಯಶ್ರೀ ಪಾಳಾ ಪ್ರಸ್ತುಪಡಿಸುವರು. ಇದರ ವಿನ್ಯಾಸ, ಸಂಗೀತ ಹಾಗೂ ನಿರ್ದೇಶನ ಜಗದೀಶ್ ಆರ್.ಜಾಣಿ ಅವರದು ಎಂದು ವಿವರಣೆ ನೀಡಿದರು.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…