ಮೈಸೂರು ನಗರ

ನವೆಂಬರ್.‌20ರಂದು ಮೈಸೂರಿನಲ್ಲಿ ಕೌದಿ ನಾಟಕ ಪ್ರದರ್ಶನ

ಮೈಸೂರು: ಇದೇ ನವೆಂಬರ್.‌20ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೌದಿ ಏಕವ್ಯಕ್ತಿ ನಾಟಕದ 50ನೇ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಕದಂಬ ರಂಗ ವೇದಿಕೆ ಅಧ್ಯಕ್ಷ ರಾಜಶೇಖರ ಕದಂಬ ತಿಳಿಸಿದರು.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪತ್ರಕರ್ತ, ಲೇಖಕ ಗಣೇಶ ಅಮೀನಗಡ ಅವರ ಬಂಗಾರದ ಮನುಷ್ಯ ನಾಟಕದ ಕೃತಿ ಬಿಡುಗಡೆ ಹಾಗೂ ಅವರ ರಚನೆಯ ಕೌದಿ ಏಕವ್ಯಕ್ತಿ ನಾಟಕದ 50ನೇ ಪ್ರದರ್ಶನವನ್ನು ನವೆಂಬರ್.‌20ರಂದು ಸಂಜೆ 6.30ಕ್ಕೆ ನಗರದ ಕಲಾಮಂದಿರದ ಪಕ್ಕದ ಕಿರು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.

ಇದನ್ನು ಓದಿ: ಆನ್‌ಲೈನ್‌ ಗೇಮಿಂಗ್‌ ಕಂಪನಿಗಳ ಮೇಲೆ ಇಡಿ ದಾಳಿ

ಟಿ.ಕೆ.ರಾಮರಾವ್‌ ಅವರ ಕಾದಂಬರಿ ಆಧರಿಸಿ ಬಂಗಾರದ ಮನುಷ್ಯ ನಾಟಕವಾಗಿ ಗಣೇಶ ಅಮೀನಗಡ ರಚಿಸಿದ್ದಾರೆ. ಇದನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಬಿಡುಗಡೆಗೊಳಿಸಲಿದ್ದಾರೆ. ಕೃತಿಯನ್ನು ಲೇಖಕ ಡಾ.ಎನ್.ಎಂ.ಗಿರಿಜಾಪತಿ ಪರಿಚಯಿಸುವರು ಎಂದು ಹೇಳಿದರು.

ಪುಸ್ತಕ ಬಿಡುಗಡೆ ನಂತರ ಕೌದಿ ನಾಟಕ ಪ್ರದರ್ಶನಗೊಳ್ಳಲಿದೆ. ಮೈಸೂರಿನಲ್ಲಿ ಮೊದಲ ಬಾರಿಗೆ ನಾಟಕ ಪ್ರದರ್ಶನಗೊಳ್ಳಲಿದೆ. ಒಂದು ಗಂಟೆ ಅವಧಿಯ ಈ ನಾಟಕವನ್ನು ಕಲಬುರ್ಗಿಯ ಭಾಗ್ಯಶ್ರೀ ಪಾಳಾ ಪ್ರಸ್ತುಪಡಿಸುವರು. ಇದರ ವಿನ್ಯಾಸ, ಸಂಗೀತ ಹಾಗೂ ನಿರ್ದೇಶನ ಜಗದೀಶ್‌ ಆರ್‌.ಜಾಣಿ ಅವರದು ಎಂದು ವಿವರಣೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

11 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

11 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

13 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

15 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

19 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

19 hours ago