ಮೈಸೂರು: ಕೆಳ ಹಂತದ ಅಧಿಕಾರಿಗಳು ಡೈರಿ ಬರೆಯುವುದನ್ನು, ಜಮೀನುಗಳಿಗೆ ಭೇಟಿ ನೀಡುವುದನ್ನು ಜಿಲ್ಲಾ ಮಟ್ಟದ ಅಧಿಕಾರಿಗಳು ಖಚಿತಪಡಿಸಿಕೊಳ್ಳಿ. ಕೆಳ ಹಂತದ ಅಧಿಕಾರಿಗಳು ನೀಡುವ ವರದಿ ಆಧರಿಸಿ ಅಗತ್ಯ ಕಂಡ ಕೃಷಿ ಭೂಮಿಗೆ ಭೇಟಿ ನೀಡಿ ಪರಿಶೀಲಿಸಿ ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದರು.
ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ರೇಷ್ಮೆ ಇಲಾಖೆ ಅಧಿಕಾರಿಗಳು ಜನಸಂಪರ್ಕ ನಡೆಸುತ್ತಲೇ ಇರಬೇಕು. ನೀವು ಜನರ ಮಧ್ಯೆ ಇದ್ದು ಕೆಲಸ ಮಾಡಲೇಬೇಕು. ಆಗ ಮಾತ್ರ ಪರಿಣಾಮಕಾರಿ ಕೆಲಸ ಸಾಧ್ಯವಾಗುತ್ತದೆ. ನೀವು ಜನಸಂಪರ್ಕ ಸಭೆ ನಡೆಸದೆ ಕೇವಲ ಸಭೆಗಳಲ್ಲಿ ಬಂದು ನೀವು ಹೇಳಿದ್ದನ್ನು ಕೇಳಿಕೊಂಡು ನಾವು ಹೋಗುವುದಿಲ್ಲ ಎಂದು ಹೇಳಿದರು,
ಕೃಷಿ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ರೈತರ ಜಮೀನುಗಳಲ್ಲಿ ಪರಿಶೀಲನೆ ನಡೆಸಬೇಕು. ರೈತರ ಸಭೆಗಳನ್ನು ನಡೆಸಬೇಕು. ಇದನ್ನೆಲ್ಲಾ ನೀವು ಮಾಡಿದ್ದೀರಾ ಎಂದು ಸಿಎಂ ಪ್ರಶ್ನಿಸಿದರು. ಈ ವೇಳೆ ಕೃಷಿ ಅಧಿಕಾರಿ ತಾವು ಗ್ರಾಮ ಭೇಟಿ ನೀಡಿದ್ದ ಡೈರಿಯನ್ನು ಸಿಎಂಗೆ ನೀಡಿದರು. ಸಿಎಂ ಡೈರಿ ಪರಿಶೀಲಿಸಿದರು. ಸಮಾಧಾನ ಆಗಲಿಲ್ಲ. ನೀವು ಭೇಟಿ ನೀಡಿದ ಫೋಟೋಗಳನ್ನು ತೋರಿಸಿ ಎಂದರು. ಅಧಿಕಾರಿಗಳು ತಾವು ಭೇಟಿ ನೀಡಿದ್ದ ಫೋಟೋಗಳನ್ನು ಪ್ರದರ್ಶಿಸಿದರು.
ಆದರೂ ಸಮಾಧಾನ ಆಗದ ಮುಖ್ಯಮಂತ್ರಿಗಳು, ರೈತರ ಜಮೀನುಗಳಿಗೆ ಭೇಟಿ ನೀಡಿದಾಗ ರೈತರಿಗೆ ಹೆಚ್ಚು ತಿಳಿವಳಿಕೆ ಇದೆಯಾ? ನಿಮಗೆ ಹೆಚ್ಚು ತಿಳಿವಳಿಕೆ ಇದೆಯಾ ಗೊತ್ತಾಯ್ತಾ ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ಅಧಿಕಾರಿಗಳು, ಪ್ರಾಕ್ಟಿಕಲ್ ಆಗಿ ರೈತರು ಬುದ್ದಿವಂತರಿರುತ್ತಾರೆ. ನಾವು ಅವರಿಂದ ಕಲಿಯುತ್ತೀವಿ ಎಂದರು.
ಪಿರಿಯಾಪಟ್ಟಣ: ತಾಲ್ಲೂಕಿನ ಬೈಲುಕುಪ್ಪೆಯಲ್ಲಿ ಖದೀಮರು 10 ಲಕ್ಷ ಮೌಲ್ಯದ ಅಡಿಕೆಯನ್ನು ಕಳ್ಳತನ ಮಾಡಿದ್ದು, ಟಿಬೆಟಿಯನ್ ರೈತರೊಬ್ಬರು ಕಂಗಾಲಾಗಿದ್ದಾರೆ. ಬೈಲಕುಪ್ಪೆಯ ತಿರುಮಲಾಪುರ…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆದಾಯ ತೆರಿಗೆ ಪಾವತಿದಾರರಲ್ಲಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮೊದಲ ಸ್ಥಾನದಲ್ಲಿದ್ದಾರೆ. ಕಿರಿಕ್ ಪಾರ್ಟಿ ಮೂಲಕ…
ಬಳ್ಳಾರಿ: ಬಳ್ಳಾರಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ. ಪ್ರಕರಣ ಕುರಿತು ಮಾತನಾಡಿದ ಮಾಜಿ…
ರಾಜೇಶ್ ಬೆಂಡರವಾಡಿ ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿ ಗ್ರಾಮದ ಬಳಿ ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ…
ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ದಿ.ಬಿ.ರಾಚಯ್ಯ ಅವರು ಸಚಿವರಾಗಿದ್ದಾಗ ಹರದನಹಳ್ಳಿ ಡಿಸ್ಟ್ರಿಕ್ಟ್ ಫಾರೆಸ್ಟ್ ಸರ್ವೆ ನಂ.೩ರಲ್ಲಿ…
ಮೈಸೂರಿನ ರೈಲು ನಿಲ್ದಾಣ ಸೇರಿದಂತೆ, ರಾಜ್ಯದ ಯಾವುದೇ ರೈಲು ನಿಲ್ದಾಣ ಮತ್ತು ರೈಲು ಗಾಡಿಗಳಲ್ಲಿ ಕುಡಿಯುವ ನೀರಿನ ಅರ್ಧ ಲೀಟರ್…