ಮೈಸೂರು ನಗರ

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ ಹೊರಗೆ ಕರೆತಂದ ಸೊಸೆ ಸುಜಾತಾ ಅವರ ಸಾಹಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈ ಘಟನೆ ಆಕಸ್ಮಿಕವಾದರೂ, ಅದು ಮಹಿಳೆಯೊಬ್ಬರ ಅಪ್ರತಿಮ ಧೈರ್ಯ ಮತ್ತು ಅತ್ತೆ-ಸೊಸೆಯ ಪವಿತ್ರ ಬಾಂಧವ್ಯಕ್ಕೆ ಹಿಡಿದ ಕೈಗನ್ನಡಿ ಎಂದು ಸಚಿವರು ಬಣ್ಣಿಸಿದ್ದಾರೆ.

​ತಮ್ಮ ಮನೆಯ ಮಂಚದಡಿ ಚಿರತೆ ಅಡಗಿರುವುದು ತಿಳಿಯುತ್ತಿದ್ದಂತೆಯೇ, ಪ್ರಾಣದ ಹಂಗು ತೊರೆದು ಕೊಠಡಿಗೆ ನುಗ್ಗಿ, ವಯಸ್ಸಾದ ಅತ್ತೆಯನ್ನು ಅಪ್ಪಿಕೊಂಡು ಸುರಕ್ಷಿತವಾಗಿ ಹೊರಗೆ ಕರೆತಂದ ಸುಜಾತಾ ಅವರ ಸಾಹಸ ನಿಜಕ್ಕೂ ರೋಮಾಂಚನಕಾರಿ. ಸಾಕ್ಷಾತ್ ಮೃತ್ಯುವಿನ ದವಡೆಯಿಂದ ಅತ್ತೆಯನ್ನು ರಕ್ಷಿಸಿದ ಅವರ ಸಮಯಪ್ರಜ್ಞೆ ಇಡೀ ಮಹಿಳಾ ಕುಲಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದಿದ್ದಾರೆ.

ಅತ್ತೆ-ಸೊಸೆಯ ಸಂಬಂಧದ ಬಗ್ಗೆ ಸಮಾಜದಲ್ಲಿರುವ ಹಳೆಯ ಕಲ್ಪನೆಗಳನ್ನು ಅಳಿಸಿ, ಸುಜಾತಾ ಅವರು ಇಂದು ಇಡೀ ರಾಜ್ಯಕ್ಕೆ ಮಾದರಿಯಾಗಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದ್ದಾರೆ.

​ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆಯಾಗಿ, ಸುಜಾತಾ ಅವರ ಈ ಅಸಾಧಾರಣ ಶೌರ್ಯವನ್ನು ನಾನು ಮನತುಂಬಿ ಶ್ಲಾಘಿಸುತ್ತೇನೆ. ಅವರ ಈ ಸಾಹಸವನ್ನು ಗೌರವಿಸಲು ಮುಂದಿನ ವರ್ಷದ “ಕಿತ್ತೂರು ರಾಣಿ ಚೆನ್ನಮ್ಮ ಸಾಹಸ ಪ್ರಶಸ್ತಿ” ಗೆ ಅವರ ಹೆಸರನ್ನು ಪರಿಗಣಿಸಲು ನಮ್ಮ ಇಲಾಖೆಗೆ ಈಗಾಗಲೇ ಸೂಚನೆ ನೀಡಿದ್ದೇನೆ ಎಂದರು.

​ಧೈರ್ಯವಂತ ಮಹಿಳೆಯರೇ ಈ ನಾಡಿನ ನಿಜವಾದ ಶಕ್ತಿ. ಸುಜಾತಾ ಅವರ ಈ ಶೌರ್ಯದ ಗಾಥೆ ಮನೆಮನಗಳಿಗೆ ತಲುಪಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

3 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

3 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

3 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

13 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

14 hours ago