Mysore
24
mist

Social Media

ಭಾನುವಾರ, 10 ನವೆಂಬರ್ 2024
Light
Dark

ಚೆನ್ನಮ್ಮನ ಸಾಹಸ ಅಮರ, ಅವರ ತ್ಯಾಗ ಬಲಿದಾನಕ್ಕೆ ಸ್ವಾತಂತ್ರ್ಯ: ಎಲ್‌. ನಾಗೇಂದ್ರ

ಮೈಸೂರು: ‘ದೇಶದ ಸ್ವಾತಂತ್ರ್ಯಕ್ಕಾಗಿ ಚನ್ನಮ್ಮ ಮಾಡಿದ ಹೋರಾಟ ಎಂದಿಗೂ ಮರೆಯಲು ಸಾಧ್ಯವಿಲ್ಲ. ಸಾವಿರಾರು ವೀರಯೋಧರೊಂದಿಗೆ ಬ್ರಿಟಿಷರನ್ನು ಹಿಮ್ಮೆಟ್ಟಿಸಿದ ಚನ್ನಮ್ಮನ ಸಾಹಸ ಎಂದೆಂದಿಗೂ ಅಮರ ಎಂದು ಬಿಜೆಪಿ ನಗರಾಧ್ಯಕ್ಷ ಎಲ್‌.ನಾಗೇಂದ್ರ ತಿಳಿಸಿದರು.

ಶ್ರೀ ಭುವನೇಶ್ವರಿ ಸೇವಾ ಟ್ರಸ್ಟ್ ವತಿಯಿಂದ ಇಂದು ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ, ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮನವರ ಜಯಂತಿ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಟ್ಟು ಮಾತನಾಡಿದರು.

ದೇಶದ ಪ್ರತಿಯೊಬ್ಬರು ಚನ್ನಮ್ಮನನ್ನು ಸ್ಮರಣೆ ಮಾಡಬೇಕು. ಹಿರಿಯ ಹೋರಾಟಗಾರರ ತ್ಯಾಗ ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಅಲ್ಲದೇ, ಚೆನ್ನಮ್ಮನ ಸಾಹಸ ಅಮರವಾಗಿದೆ. ಹೀಗಾಗಿ ಸಮಾಜಕ್ಕೆ ಕೊಡುಗೆ ನೀಡಿದ ಮಹನೀಯರನ್ನು ಸ್ಮರಿಸಬೇಕು. ಮಕ್ಕಳಲ್ಲಿ ಚೆನ್ನಮ್ಮನ ಆದರ್ಶಗಳನ್ನು ಬೆಳೆಸಲು ಪಾಲಕರು ಮುಂದಾಗಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಮಾಜ ಸೇವಕ ಕೆ ರಘುರಾಮ್ ವಾಜಪೇಯಿ, ಮಾಜಿ ನಗರ ಪಾಲಿಕಾ ಸದಸ್ಯೆ ಪ್ರಮೀಳಾ ಭರತ್, ಜಗದೀಶ್, ಶ್ರೀ ಭುವನೇಶ್ವರಿ ಸೇವಾ ಟ್ರಸ್ಟ್ ಅಧ್ಯಕ್ಷೆ ನಾಗಶ್ರೀ ಸುಚಿಂದ್ರ, ಅಪೂರ್ವ ಸುರೇಶ್, ಅಂಬಾಭವಾನಿ ಸಮಾಜ ಮಹಿಳಾ ಅಧ್ಯಕ್ಷೆ ಸವಿತಾ ಘಾಟ್ಕೆ, ಸಮಾಜ ಸೇವಕರಾದ ವಿದ್ಯಾ, ಮಂಜುನಾಥ್, ವಿಘ್ನೇಶ್ವರ ಭಟ್, ಸುದರ್ಶನ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

 

 

Tags: