ಮೈಸೂರು: ಕಾಂಗ್ರೆಸ್ ಪಕ್ಷದಲ್ಲಿ ಏನೇ ಬದಲಾವಣೆ ಇದ್ದರೂ ನಮ್ಮ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ಕೆಲ ಸಚಿವರಿಗೆ ಕೊಕ್ ಎಂಬ ಶಾಸಕ ತನ್ವೀರ್ ಸೇಠ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾತನಾಡಿದ ಅವರು, ಸಚಿವರ ಬದಲಾವಣೆ ತೀರ್ಮಾನವನ್ನು ತನ್ವೀರ್ ಸೇಠ್ ಮಾಡುತ್ತಾರಾ? ಎಂದು ಪ್ರಶ್ನೆ ಮಾಡಿದರು. ಶಾಸಕರು ಅವರ ಅಭಿಪ್ರಾಯ ಹೇಳಿದ್ದಾರೆ ಎಲ್ಲವನ್ನೂ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ.
ಪಕ್ಷದ ಅಧ್ಯಕ್ಷರು, ಸಿಎಂ ಸೇರಿದಂತೆ ಏನೇ ಬದಲಾವಣೆ ಇದ್ದರು ಕೂಡ ಎಲ್ಲವೂ ಯಾವ ಸಮಯಕ್ಕೆ ಅನ್ನೋದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲಾ ಬದ್ಧ. ರಾಜಕಾರಣ ನಿಂತ ನೀರಲ್ಲ, ಹರಿಯುವ ನೀರು ಎಂದರು.





