ಮೈಸೂರು ನಗರ

ವಿಜ್ಞಾನದಷ್ಟೇ ಸಂವಿಧಾನದ ಅರಿವು ಮುಖ್ಯ

ಸಂತ ಫ್ರಾನ್ಸಿಸ್ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಕೆ.ದೀಪಕ್ ಕರೆ

ಮೈಸೂರು : ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನದ ಜ್ಞಾನದ ಜತೆಗೆ ದೇಶದ ಇತಿಹಾಸ, ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮಹತ್ವವನ್ನೂ ತಿಳಿದುಕೊಳ್ಳಬೇಕು ಎಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ತಿಳಿಸಿದರು.

ನಗರದ ಹೊರವಲಯದ ಜೆಟ್ಟಿಹುಂಡಿ- ಬೀರಿಹುಂಡಿಯಲ್ಲಿರುವ ಸಂತ‌ ಫ್ರಾನ್ಸಿಸ್ ಶಾಲೆಯಲ್ಲಿ ಇಂದು‌ ಆಯೋಜಿಸಿದ್ದ ಕಲಾ ಮತ್ತು ವಿಜ್ಞಾನ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಶಾಲಾ ಪಠ್ಯಕ್ರಮದ ಜೊತೆಗೆ ಇಂದಿನ ಸ್ಪರ್ಧಾತ್ಮಕ ಮತ್ತು ಡಿಜಿಟಲ್ ಯುಗಕ್ಕೆ ಅಣಿಯಾಗಬೇಕಿದ್ದು, ಕೌಶಲ್ಯ ವೃದ್ಧಿಗೆ ಆದ್ಯತೆ ನೀಡಬೇಕು. ಸಮೂಹ ಕಲೆ, ಸಮಯ ನಿರ್ವಹಣೆ, ಭಿನ್ನ ಆಲೋಚನೆ, ನಾಯಕತ್ವ ಗುಣ ಮತ್ತು ಡಿಜಿಟಲ್ ಜ್ಞಾನವನ್ನು ಮೈಗೂಡಿಸಿಕೊಳ್ಳಬೇಕು ಎಂದರು.

ಕೇವಲ ಶಿಕ್ಷಣ, ತಂತ್ರಜ್ಞಾನ, ಕೌಶಲ್ಯ ವೃದ್ಧಿಗೆ ಸೀಮಿತರಾಗದೆ. ಈ ದೇಶದ ಸ್ವಾತಂತ್ರ್ಯದ ಮಹತ್ವ, ಪ್ರಜಾಪ್ರಭುತ್ವದ ಮಹತ್ವ , ಮಾನವೀನ ಮೌಲ್ಯ ಮತ್ತು ಸಂವಿಧಾನದ ಅರಿವು ಬಹಳ ಮುಖ್ಯ. ಆಗ ಮಾತ್ರ ನಾವು ಪರಿಪೂರ್ಣ ನಾಗರಿಕರಾಗಲು ಸಾಧ್ಯ ಎಂದು ಹೇಳಿದರು.

ನಂತರ ವಿಜ್ಞಾನ, ಗಣಿತ, ಹಿಂದಿ, ಇಂಗ್ಲಿಷ್, ಕನ್ನಡ, ಕ್ರೀಡಾ ವಿಭಾಗಗಳಲ್ಲಿ ದೇಶದ ಇತಿಹಾಸ, ಪರಂಪರೆ, ವಿಜ್ಞಾನದ ಮಾದರಿಗಳು, ಕ್ರೀಡಾ ಸಾಧಕರ ಮಾದರಿಗಳ ಅನಾವರಣಗೊಳಿಸಲಾಗೊತ್ತು.

ಶಾಲೆಯ ನಿರ್ದೇಶಕ ವಿಜಯ್ ಕುಮಾರ್ ಪೆರೆರ, ಬ್ರದರ್ ಬ್ರಿಟೊ, ಬ್ರದರ್ ಅಬಿನಾಶ್, ಪ್ರಾಂಶುಪಾಲರಾದ ಸಿಸ್ಟರ್ ಅಂಜುಮಾನ್ ಕುರಿಯನ್, ಉಪ ಪ್ರಾಂಶುಪಾಲರಾದ ರೇಣು ಶ್ರೀನಿವಾಸ್ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

10 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

11 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

12 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

16 hours ago