ಮೈಸೂರು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಕೊಡಗಿನ ಯೋಧ ದಿವಿನ್ ಎಂಬುವವರು ಮೃತ ಪಟ್ಟಿದ್ದು, ಇಂದು ಅವರ ಪಾರ್ಥಿವ ಶರೀರಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಂತಿಮ ನಮನ ಸಲ್ಲಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕಳೆದ ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಕಂದಕಕ್ಕೆ ಉರುಳಿದ ಸೇನಾ ಅಪಘಾತದಲ್ಲಿ ನಿಧನರಾದ ಕೊಡಗಿನ ಹುತಾತ್ಮ ಯೋಧ ದಿವಿನ್ ಅವರ ಪಾರ್ಥಿವ ಶರೀರವನ್ನು ಇಂದು(ಡಿಸೆಂಬರ್.31) ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸೇನಾ ಗೌರವದೊಂದಿಗೆ ಅಂತಿಮ ಸಲ್ಲಿಸಲಾಯಿತು ಎಂದು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಡಿಸೆಂಬರ್.24 ರಂದು ಕಂದಕಕ್ಕೆ ಉರುಳಿದ ಸೇನಾ ಅಪಘಾತದಲ್ಲಿ ಕೊಡಗಿನ ಯೋಧ ದಿವಿನ್ ಎಂಬುವವರು ನಿಧನರಾಗಿದ್ದರು. ಅವರ ಪಾರ್ಥಿವ ಶರೀರವನ್ನು ಇಂದು ಬೆಂಗಳೂರಿಗೆ ರವಾನಿಸಲಾಗಿತ್ತು. ಈ ವೇಳೆ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸಂಸದ ಯದುವೀರ್ ಒಡೆಯರ್ ಯೋಧನ ಪಾರ್ಥಿವ ಶರೀರಕ್ಕೆ ಸಕಲ ಸರ್ಕಾರಿ ಗೌರವ ಸಿದ್ಧತೆಗಳೊಂದಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.