ಮೈಸೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹೆಸರು ತಳುಕು ಹಾಕಿಕೊಂಡಿರುವ ಕಾರಣ ಮನವರಿಕೆ ಮಾಡಿಕೊಡಲು ಕಾಂಗ್ರೆಸ್ ನಿಯೋಗ ಮುಂದಾಗಿದೆ.
ಇಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಜೆ.ವಿಜಯಕುಮಾರ್ ನೇತೃತ್ವದ ನಿಯೋಗ ಮುಡಾ ಆಯುಕ್ತ ರಘುನಂದನ್ ಅವರನ್ನ ಭೇಟಿ ಮಾಡಿ ವಾಸ್ತವಾಂಶ ಕುರಿತು ಸಾಕಷ್ಟು ಸಮಾಲೋಚನೆ ಮಾಡಿದರು. ಈ ಸಂದರ್ಭ ಕಾಂಗ್ರೆಸ್ ನ ಹಲವು ಮುಖಂಡರು ಉಪಸ್ಥಿತರಿದ್ದರು.