ಮೈಸೂರು ನಗರ

ಸಮುದ್ರದ ಅನುಭವ ನೀಡುತ್ತಿದೆ ಕೆ.ಆರ್.ಎಸ್ ಬ್ಯಾಕ್ ವಾಟರ್

ಮಂಡ್ಯ : ‌ ರಾಜ್ಯದಾದ್ಯಂತ ಈಗಾಗಲೇ ಉತ್ತಮ ಮಳೆಯಾಗಿದ್ದು, ಎಲ್ಲಾ ಜಲಾಶಯಗಳ ನೀರಿನ ಮಟ್ಟ ಏರಿಕೆಯಾಗುತ್ತಿವೆ. ಕೇರಳ ಹಾಗೂ ವಯನಾಡು ಭಾಗದಲ್ಲಿ ಉತ್ತಮವಾದ ಮಳೆಯಾಗಿರುವ ಕಾರಣ ಜಿಲ್ಲೆಯ ಕೆ ಆರ್‌ ಎಸ್‌ ಜಲಾಶಯದ ಒಳ ಹರಿವಿನ ಮಟ್ಟ ಏರಿಕೆಯಾಗಿದ್ದು, ಜಲಾಶಯ ತುಂಬಿ ತುಳುಕುತ್ತಿದೆ.

ಮಳೆ ಆರಂಭಕ್ಕೂ ಮೊದಲು ನೀರು ಇಲ್ಲದೆ ಖಾಲಿ ಖಾಲಿಯಾಗಿದ್ದ ಜಲಾಶಯ ಈಗ ಭರ್ಜರಿ ಮಳೆಯಿಂದ ತುಂಬಿದೆ. ಇದರಿಂದಾಗಿ ಪ್ರವಾಸಿಗರನ್ನ ತನ್ನತ್ತ ಸೆಳೆಯುತ್ತಿದೆ. ಅದರಲ್ಲೂ ವೇಣುಗೋಪಾಲಸ್ವಾಮಿ ದೇವಸ್ಥಾನದ ಹಿಂದೆ ಇರುವ ಹಿನ್ನೀರಿನಲ್ಲಿ ಈಗ ಪ್ರವಾಸಗರ ದಂಡೆ ಹರಿದುಬರುತ್ತಿದೆ.

ಜಲಾಶಯದ ತುಂಬಿ ತುಳುಕುತ್ತಿರುವುದರಿಂದ ಹಿನ್ನೀರು ಸಮುದ್ರದಂತೆ ಅಲೆಗಳು ಏಳುತ್ತಿದ್ದು ಜನರಿಗೆ ಒಂದು ಕಡಲ ಕಿನಾರೆ ರೀತಿ ಅನುಭವವನ್ನು ಕೊಡುತ್ತಿದೆ.  ಹೀಗಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಕೂಡ ಈ ಕೆ.ಆರ್‌ ಎಸ್‌ ಬ್ಯಾಕ್‌ ವಾಟರ್‌ ಗೆ ಬಂದು ನೀರಿನ ಬಳಿ ಆಟ ಆಡಿ, ಮೋಜು ಮಾಡಿಕೊಂಡು ಸೆಲ್ಫಿ ತೆಗೆದುಕೊಳ್ಳುವುದರಲ್ಲಿ ಬ್ಯುಸಿಯಾಗಿದ್ದಾರೆ. ಇನ್ನ ಕೆಲವರು ತಮ್ಮ ಒತ್ತಡದ ಬದುಕು, ಸಾಕಷ್ಟು ಜವಾಬ್ದಾರಿಗಳ ನಡುವೆ ಈ ಬ್ಯಾಕ್‌ ವಾಟರ್‌ ಗೆ ಬಂದು ತಮ್ಮ ಕಷ್ಟ ಸುಖ, ನೋವು ನಲಿವು ಎಲ್ಲವನ್ನು ಮರೆತು ಸಮುದ್ರ ಅಲೆಗಳಂತೆ ಅಪ್ಪಳಿಸುತ್ತಿರುವ ಹಿನ್ನೀರನ್ನ ನೋಡಿ ರಿಲ್ಯಾಕ್ಸ್‌ ಮಾಡುತ್ತಿದ್ದಾರೆ.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಮೈಸೂರು: ಬೀದಿನಾಯಿ ಹೊತ್ತೊಯ್ದ ಚಿರತೆ

ಮೈಸೂರು: ಚಿರತೆಯೊಂದು ರಾತ್ರೋರಾತ್ರಿ ಬೀದಿ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಮೈಸೂರಿನ ಹೊರವಲಯದ ಬೆಳಗಾವಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಕಾಡು…

15 mins ago

ಸಾರ್ವಕಾಲಿಕ ದಾಖಲೆ ಸೃಷ್ಟಿಸಿದ ಚಿನ್ನ, ಬೆಳ್ಳಿ ಬೆಲೆ

ಬೆಂಗಳೂರು,- ನಿರಂತರ ಏರಿಕೆಯಿಂದಾಗಿ ಚಿನ್ನ, ಬೆಳ್ಳಿ ಬೆಲೆಯು ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. ಇಂದು ಪ್ರತೀ ಗ್ರಾಂ ಚಿನ್ನಕ್ಕೆ (24 ಕ್ಯಾರೆಟ್)…

25 mins ago

ಟೆಕ್ಸಾಸ್‌ ಕರಾವಳಿ ಬಳಿ ಮೆಕ್ಸಿಕನ್‌ ನೌಕಾಪಡೆ ವಿಮಾನ ಪತನ: 5 ಮಂದಿ ಸಾವು

ಅಮೇರಿಕಾ: ಯುವ ರೋಗಿಯನ್ನು ಹಾಗೂ ಇತರ ಏಳು ಜನರನ್ನು ಸಾಗಿಸುತ್ತಿದ್ದ ಮೆಕ್ಸಿಕ್ನ ನೌಕಾಪಡೆಯ ಸಣ್ಣ ವಿಮಾನವು ಗಾಲ್ವೆಸ್ಟನ್‌ ಬಳಿ ಪತನಗೊಂಡು…

1 hour ago

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ಪ್ರಕಾಶ್‌ ರಾಜ್‌ ಆಯ್ಕೆ

ಬೆಂಗಳೂರು: 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್‌ ರಾಜ್‌ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…

2 hours ago

ನಾಯಕತ್ವ ಬದಲಾವಣೆ ವಿಚಾರ: ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಿಷ್ಟು.!

ಬೆಂಗಳೂರು: ನಾಯಕತ್ವದ ಬದಲಾವಣೆಯ ವಿಚಾರವಾಗಿ ಹೈಕಮಾಂಡ್ ನಾಯಕರು ಹೇಳಿದಂತೆ ನಡೆದುಕೊಳ್ಳುತ್ತೇವೆ. ಸ್ಥಳೀಯ ನಾಯಕರೇ ಗೊಂದಲಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷ…

2 hours ago

ರೈತರಿಗೆ, ಜನರಿಗೆ ರಕ್ಷಣೆ ಕೊಡುವುದು ನಮ್ಮ ಕರ್ತವ್ಯ: ಸಚಿವ ಕೆ.ವೆಂಕಟೇಶ್‌

ಚಾಮರಾಜನಗರ: ಒಟ್ಟಿಗೆ ಐದು ಹುಲಿಗಳು ಕಾಣಿಸಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ವೆಂಕಟೇಶ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ…

2 hours ago