ಮೈಸೂರು ನಗರ

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್

ಮೈಸೂರು: ಆರ್‌ಸಿಬಿ ಅಭಿಮಾನಿಗಳಿಗೆ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್‌ ಪ್ರಸಾದ್‌ ಗುಡ್‌ನ್ಯೂಸ್‌ ನೀಡಿದ್ದು, ಈ ಬಾರಿಯ ಐಪಿಎಲ್‌ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಉದ್ಘಾಟನೆ ಐಪಿಎಲ್‌ ಪಂದ್ಯ ನಡೆಸುವಂತೆ ಈಗಾಗಲೇ ಬಿಸಿಸಿಐ ಜೊತೆ ಮಾತುಕತೆ ನಡೆಸಿದ್ದೇನೆ. ಬಿಸಿಸಿಐ ಸಹ ಬೆಂಗಳೂರಿನಲ್ಲಿ ಈ ಬಾರಿಯ ಉದ್ಘಾಟನೆ ಪಂದ್ಯ ನಡೆಸಲು ಮಾತುಕತೆ ನಡೆಸುತ್ತಿದೆ. ಪ್ರತಿ ವರ್ಷ ಐಪಿಎಲ್ ಟ್ರೋಫಿ ಗೆದ್ದ ಹೋಂ ಗ್ರೌಂಡ್ ನಲ್ಲೇ ಉದ್ಘಾಟನೆ ಪಂದ್ಯ ನಡೆಯುತ್ತಿತ್ತು. ಆರ್‌ಸಿಬಿ ಸಂಭ್ರಮಾಚರಣೆಯ ವೇಳೆ ಘಟನೆಯಿಂದ ಸಾಕಷ್ಟು ಗೊಂದಲಗಳಾಗಿತ್ತು. ಹೀಗಾಗಿ ನಮ್ಮ ತಂಡ ಚುನಾವಣೆ ಗೆದ್ದ ಬಳಿಕ ಈಗಾಗಲೇ ರಾಜ್ಯ ಸರ್ಕಾರದ ಜೊತೆ ಮಾತುಕತೆ ನಡೆಸಿದ್ದೇವೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಈಗಾಗಲೇ ಪಂದ್ಯಾವಳಿ ನಡೆಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಗೃಹ ಸಚಿವರ ಜೊತೆ ಫೋನ್ ಮೂಲಕ ಮಾತನಾಡಿದ್ದೇನೆ. ಶೀಘ್ರದಲ್ಲೇ ಈ ಬಾರಿಯ ಐಪಿಎಲ್ ಉದ್ಘಾಟನೆ ಪಂದ್ಯದ ದಿನಾಂಕ ನಿಗದಿಯಾಗಲಿದೆ. ಬೆಂಗಳೂರಿನಲ್ಲಿ ಐಪಿಎಲ್, ಅಂತರಾಷ್ಟ್ರೀಯ ಸೇರಿದಂತೆ ಎಲ್ಲಾ ಮಾದರಿಯ ಪಂದ್ಯಗಳು ನಡೆಯುತ್ತದೆ ಎಂದು ಮಾಹಿತಿ ನೀಡಿದರು.

ಇನ್ನು ವಿಜಯ್ ಹಜಾರೆ ಪಂದ್ಯಕ್ಕೆ ವಿರಾಟ್ ಕೊಹ್ಲಿ ಬೆಂಗಳೂರಿಗೆ ಬರಲಿದ್ದಾರೆ. ಚಿನ್ನಸ್ವಾಮಿ ಸೇರಿದಂತೆ ಮೂರು ಕ್ರೀಡಾಂಗಣ ಬೆಂಗಳೂರಿನಲ್ಲಿದೆ. ಡೆಲ್ಲಿ ತಂಡದಿಂದ ಈ ಬಾರಿ ವಿರಾಟ್ ಕೊಹ್ಲಿ ಆಡಲಿದ್ದಾರೆ. ಪಂದ್ಯ ಎಲ್ಲಿ ನಡೆಯಲಿದೆ ಎಂಬ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. ಮೈಸೂರಿನಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣದ ಬಗ್ಗೆ ಎಲ್ಲಾ ಮಾತುಕತೆಗಳು ನಡೆಯುತ್ತಿದೆ.
ಕಳೆದ ಮೂರು ವರ್ಷಗಳಿಂದ ಕ್ಲಬ್‌ನಲ್ಲಿ ಸಾಕಷ್ಟು ಗೊಂದಗಳಾಗಿತ್ತು. ಎಲ್ಲಾ ಗೊಂದಲಗಳನ್ನು ನಮ್ಮ ತಂಡ ಬಗೆಹರಿಸಿ ಉತ್ತಮ ಕ್ರಿಕೆಟ್‌ಗೆ ಆದ್ಯತೆ ನೀಡುತ್ತೇವೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

3 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

3 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

4 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

4 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

5 hours ago

ಮೈಸೂರು | ಕರಗ ಮಹೋತ್ಸವ ಸಂಪನ್ನ

ಮೈಸೂರು : ನಗರದ ಇಟ್ಟಿಗೆಗೂಡಿನ ಶ್ರೀ ರೇಣುಕಾದೇವಿ ಕರಗ ದೇವಸ್ಥಾನ ಟ್ರಸ್ಟ್, ಶ್ರೀ ಚಾಮುಂಡೇಶ್ವರಿ ಮತ್ತು ಮಾರಿಯಮ್ಮನವರ ೧೦೨ನೇ ಕರಗಮಹೋತ್ಸವ…

5 hours ago