ಮೈಸೂರು: ಆರ್‌ಸಿಬಿ ಅಭಿಮಾನಿಗಳಿಗೆ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಗುಡ್‌ನ್ಯೂಸ್ ನೀಡಿದ್ದು, ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಉದ್ಘಾಟನೆ ಐಪಿಎಲ್ ಪಂದ್ಯ ನಡೆಸುವಂತೆ ಈಗಾಗಲೇ ಬಿಸಿಸಿಐ ಜೊತೆ ಮಾತುಕತೆ ನಡೆಸಿದ್ದೇನೆ. ಬಿಸಿಸಿಐ ಸಹ ಬೆಂಗಳೂರಿನಲ್ಲಿ ಈ ಬಾರಿಯ ಉದ್ಘಾಟನೆ ಪಂದ್ಯ ನಡೆಸಲು ಮಾತುಕತೆ ನಡೆಸುತ್ತಿದೆ. ಪ್ರತಿ ವರ್ಷ ಐಪಿಎಲ್ ಟ್ರೋಫಿ ಗೆದ್ದ ಹೋಂ ಗ್ರೌಂಡ್ ನಲ್ಲೇ ಉದ್ಘಾಟನೆ ಪಂದ್ಯ ನಡೆಯುತ್ತಿತ್ತು. ಆರ್‌ಸಿಬಿ ಸಂಭ್ರಮಾಚರಣೆಯ ವೇಳೆ ಘಟನೆಯಿಂದ ಸಾಕಷ್ಟು ಗೊಂದಲಗಳಾಗಿತ್ತು. ಹೀಗಾಗಿ ನಮ್ಮ ತಂಡ ಚುನಾವಣೆ ಗೆದ್ದ ಬಳಿಕ ಈಗಾಗಲೇ ರಾಜ್ಯ ಸರ್ಕಾರದ ಜೊತೆ ಮಾತುಕತೆ ನಡೆಸಿದ್ದೇವೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಈಗಾಗಲೇ ಪಂದ್ಯಾವಳಿ ನಡೆಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಗೃಹ ಸಚಿವರ ಜೊತೆ ಫೋನ್ ಮೂಲಕ ಮಾತನಾಡಿದ್ದೇನೆ. ಶೀಘ್ರದಲ್ಲೇ ಈ ಬಾರಿಯ ಐಪಿಎಲ್ ಉದ್ಘಾಟನೆ ಪಂದ್ಯದ ದಿನಾಂಕ ನಿಗದಿಯಾಗಲಿದೆ. ಬೆಂಗಳೂರಿನಲ್ಲಿ ಐಪಿಎಲ್, ಅಂತರಾಷ್ಟ್ರೀಯ ಸೇರಿದಂತೆ ಎಲ್ಲಾ ಮಾದರಿಯ ಪಂದ್ಯಗಳು ನಡೆಯುತ್ತದೆ ಎಂದು ಮಾಹಿತಿ ನೀಡಿದರು.
ಇನ್ನು ವಿಜಯ್ ಹಜಾರೆ ಪಂದ್ಯಕ್ಕೆ ವಿರಾಟ್ ಕೊಹ್ಲಿ ಬೆಂಗಳೂರಿಗೆ ಬರಲಿದ್ದಾರೆ. ಚಿನ್ನಸ್ವಾಮಿ ಸೇರಿದಂತೆ ಮೂರು ಕ್ರೀಡಾಂಗಣ ಬೆಂಗಳೂರಿನಲ್ಲಿದೆ. ಡೆಲ್ಲಿ ತಂಡದಿಂದ ಈ ಬಾರಿ ವಿರಾಟ್ ಕೊಹ್ಲಿ ಆಡಲಿದ್ದಾರೆ. ಪಂದ್ಯ ಎಲ್ಲಿ ನಡೆಯಲಿದೆ ಎಂಬ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. ಮೈಸೂರಿನಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣದ ಬಗ್ಗೆ ಎಲ್ಲಾ ಮಾತುಕತೆಗಳು ನಡೆಯುತ್ತಿದೆ.
ಕಳೆದ ಮೂರು ವರ್ಷಗಳಿಂದ ಕ್ಲಬ್‌ನಲ್ಲಿ ಸಾಕಷ್ಟು ಗೊಂದಗಳಾಗಿತ್ತು. ಎಲ್ಲಾ ಗೊಂದಲಗಳನ್ನು ನಮ್ಮ ತಂಡ ಬಗೆಹರಿಸಿ ಉತ್ತಮ ಕ್ರಿಕೆಟ್‌ಗೆ ಆದ್ಯತೆ ನೀಡುತ್ತೇವೆ ಎಂದು ಹೇಳಿದರು.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…