Mysore
20
clear sky

Social Media

ಗುರುವಾರ, 29 ಜನವರಿ 2026
Light
Dark

ಕುಕ್ಕರಹಳ್ಳಿ ಕೆರೆ ಸ್ವಚ್ಛತೆಗೆ ಸಂಸದರಿಂದ ಚಾಲನೆ

ಮೈಸೂರು: ನಗರದ ಕುಕ್ಕರಹಳ್ಳಿ ಕೆರೆ ಆವರಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಬುಧವಾರ(ಜು.17) ನಡೆದ ಸ್ವಚ್ಛತಾ ಅಭಿಯಾನದಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪಾಲ್ಗೊಂಡು, ಕೆರೆ ಏರಿ ಮೇಲೆ ಬಿದಿದ್ದ ಪ್ಲಾಸ್ಟಿಕ್ ಬಾಟಲ್, ಪ್ಲಾಸ್ಟಿಕ್ ಕವರ್ ಸೇರಿದಂತೆ ವಿವಿಧ ತ್ಯಾಜ್ಯ ಸಂಗ್ರಹ ಮಾಡಿದರು.

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೈಸೂರಿನ ಪ್ರಸಿದ್ಧ ಕುಕ್ಕರಹಳ್ಳಿ ಕೆರೆಯಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡಿದ್ದು, ಮೈಸೂರಿನ ಹಲವಾರು ಸಂಘ ಸಂಸ್ಥೆಗಳೊಂದಿಗೆ ಸ್ವಚ್ಛತಾ ಕಾರ್ಯವನ್ನು ಮುಂದುವರಿಸುತ್ತಾ ಬಂದಿದ್ದೇವೆ. ಮೈಸೂರಿನ ಕೆರೆಗಳು, ಸ್ಮಾರಕಗಳು ಪ್ರಸಿದ್ಧ ಸ್ಥಳಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಎಂಬುದು ನಮ್ಮ ಉದ್ದೇಶವಾಗಿದೆ. ಹಾಗಾಗಿ ಸ್ವಚ್ಚತಾ ಅಭಿಯಾನ ಹಮ್ಮೊಕೊಂಡಿದ್ದೇವೆ. ಇದು ಹೀಗೆ ಮುಂದುವರೆಯಲಿದೆ ಎಂದು ಹೇಳಿದರು.

ನಾನು ಮೈಸೂರಿನಲ್ಲಿ ಇರುವ ವೇಳೆ ಸ್ವಚ್ಛತಾ ಕಾರ್ಯವನ್ನು ಕೈಗೊಂಡು, ಮುಂದುವರೆಸಿಕೊಂಡು ಹೋಗುತ್ತೇನೆ. ಈ ಸ್ವಚ್ಚತಾ ಅಭಿಯಾನಕ್ಕೆ ಇಂದು ಚಾಲನೆ ನಿಡಿದ್ದೇವೆ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನಿಮ್ಮ ಸಹಕಾರ ಹೀಗೆ ಇರಲಿ ಎಂದರು.

Tags:
error: Content is protected !!