ಮೈಸೂರು: ಕ್ಯಾತಮಾರನಹಳ್ಳಿ ಮಸೀದಿ ರೀ ಓಪನ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ಷೇಪ ವ್ಯಕ್ತಪಡಿಸಿದ್ದು, ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೆಸಿಡೆನ್ಸಿ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಮಸೀದಿಯನ್ನು ರೀಓಪನ್ ಮಾಡಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ನಾನೊಬ್ಬ ಬಿಜೆಪಿ ಕಾರ್ಯಕರ್ತನಾಗಿ ಸಿದ್ದರಾಮಯ್ಯ ಅವರಿಗೆ ಚಾಲೆಂಜ್ ಮಾಡಿ ಹೇಳುತ್ತೇನೆ. ತಾಕತ್ತಿದ್ದರೆ ಓಪನ್ ಮಾಡಿ ನೋಡಿ. ಆ ಮಸೀದಿ ರಾಜು ಹತ್ಯೆಯಾದ ಬಳಿಕ ಬಂದಾಗಿದೆ. ಈಗ ಅದನ್ನ ಓಪನ್ ಮಾಡೋಕೆ ಅಷ್ಟು ಸುಲಭವಾಗಿ ಬಿಡಲ್ಲ ಎಂದು ಸವಾಲು ಹಾಕಿದ್ದಾರೆ.
ಇನ್ನು ಸಿದ್ದರಾಮಯ್ಯ ಮೊದಲ ಬಾರಿ ಸಿಎಂ ಆಗಿದ್ದಾಗ ಗಲಭೆ ದೊಂಬಿಯಲ್ಲಿ ಭಾಗಿಯಾಗಿದ್ದ 1600 ದುರುಳರ ವಿರುದ್ಧ 175 ಪ್ರಕರಣಗಳನ್ನ ಖುಲಾಸೆ ಮಾಡಿದ್ದಾರೆ. ಆ ಎಲ್ಲಾ ಪ್ರಕರಣಗಳನ್ನು ವಾಪಸ್ ತೆಗೆದುಕೊಂಡು ತಾಲಿಬಾನ್ ಸರ್ಕಾರ ನಡೆಸುತ್ತಿದ್ದಾರೆ. ಕೊಡಗಿನಲ್ಲಿ ಕುಟ್ಟಪ್ಪ ಹತ್ಯೆ, ಬೆಂಗಳೂರು ರುದ್ರೇಶ್ ಹತ್ಯೆ, ಮೈಸೂರಿನಲ್ಲಿ ರಾಜು ಹತ್ಯೆ ಆಯಿತು. ರಾಜು ಹತ್ಯೆ ಆದ ಬಳಿಕ ಮಸೀದಿ ಬಂದ್ ಮಾಡಿಸಿದ್ದೆವು. ಇವತ್ತು ಸಿದ್ದರಾಮಯ್ಯ ಅವರು ಬಂದ ಮೇಲೆ ಬಂದ್ ಆಗಿರುವ ಮಸೀದಿಯನ್ನ ಓಪನ್ ಮಾಡಲು ಮುಂದಾಗಿದ್ದಾರೆ. ಈ ವಿಚಾರದ ಬಗ್ಗೆ ಚರ್ಚೆ ಮಾಡಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಕರೆದಿದ್ದಾರೆ. ಪೂರಕ ದಾಖಲೆಗಳನ್ನು ತೆಗೆದುಕೊಂಡು ಸಭೆಗೆ ಹಾಜರಾಗಬೇಕು ಎಂದು ಹೇಳಿದ್ದಾರೆ. ರೆಸಿಡೆನ್ಸಿ ಸೈಟ್ ನಲ್ಲಿ ಮಸೀದಿ ಮಾಡಿರುವುದೇ ಮೊದಲನೇ ತಪ್ಪು ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ಇನ್ನು ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ನಡೀತಾ ಇದೆ. ದಾಖಲೆಯನ್ನು ನಾವು ಯಾಕೆ ಕೊಡಬೇಕು.? ಇದನ್ನ ನಾವು ಸಂಪೂರ್ಣವಾಗಿ ಖಂಡಿಸುತ್ತೇವೆ. ಯಾವುದೇ ಕಾರಣಕ್ಕೂ ಆ ಮಸೀದಿಯನ್ನು ತೆರೆಯಲು ಬಿಡಲ್ಲ. ನಿಮ್ಮ ಉದ್ದೇಶ ಏನು? ನಿಮಗೆ ಮಸ್ಲಿಂಮರ ವೋಟ್ ಬಿಟ್ಟರೆ ಬೇರೆಯವರ ವೋಟ್ ಬೇಡವಾ.? 5 ವರ್ಷ ಏನೂ ಮಾಡಕ್ಕಾಗಲ್ಲ ಅಂದುಕೊಂಡಿದ್ದೀರಾ ಎಂದು ಪ್ರಶ್ನೆ ಮಾಡಿದರು.
ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೊರಾದ ನೈಟ್‌ಕ್ಲಬ್ ಬೀರ್ಚ್ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…
ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…
ಗೋವಾ: ಇಲ್ಲಿನ ನೈಟ್ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್…
ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್‌ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…
ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…
ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…