ಮೈಸೂರು: ನಗರದ ಕೆಆರ್‌ಎಸ್ ರಸ್ತೆಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಹೆಸರನ್ನು ನಾಮಕರಣ ಮಾಡಬೇಕು ಎಂದು ಬಿಜೆಪಿ ನಗರ ಜಿಲ್ಲಾಧ್ಯಕ್ಷ ಎಲ್.ನಾಗೇಂದ್ರ ಆಗ್ರಹಿಸಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ಇಂದು(ಡಿಸೆಂಬರ್.26) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಎಸ್.ಎಂ.ಕೃಷ್ಣ ಕಾಲದಲ್ಲಿ ಮೈಸೂರಿನ ಹೊರ ವಲಯ ರಸ್ತೆಯಲ್ಲಿ ರಿಂಗ್ ರೋಡ್ ನಿರ್ಮಾಣ ಆಗಿದೆ. ಹಾಗಾಗಿ ಅಂತಹ ಮಹನೀಯರ ಹೆಸರನ್ನು ಕೆಆರ್‌ಎಸ್ ರಸ್ತೆಗೆ ನಾಮಕರಣ ಮಾಡಬೇಕು ಎಂದಿದ್ದಾರೆ.
ಕೆ.ಆರ್.ಎಸ್ ರಸ್ತೆಗೆ ಈ ಹಿಂದೆ ಪ್ರಿನ್ಸೆಸ್ ರಸ್ತೆ ಎಂದು ಮೈಸೂರು ಸಂಸ್ಥಾನದ ರಾಜಕುಮಾರಿ ಹೆಸರಿತ್ತು. ಆದರೆ ರಾಜಕುಮಾರಿ ಟಿಬಿ ಕಾಯಿಲೆಯಿಂದ ತೀರಿ ಹೋದರು. ಇನ್ನೂ ಯಾರು ಈ ಕಾಯಿಲೆಯಿಂದ ಮೃತರಾಗಬಾರದು ಎಂದು ನಾಲ್ವಡಿ ಕೃಷ್ಣರಾಜ ಒಡೆಯರ್ 100 ಎಕರೆ ಜಾಗದಲ್ಲಿ ಪಿಕೆಟಿಬಿ ಆಸ್ಪತ್ರೆ ಕಟ್ಟಿಸಿದ್ದರು. ಬಳಿಕ ರಾಜಕುಮಾರಿ ನೆನಪಿನಾರ್ಥ ಆಸ್ಪತ್ರೆಯಿರುವ ರಸ್ತೆಗೆ ಪ್ರಿನ್ಸೆಸ್ ರಸ್ತೆ ( ರಾಜಕುಮಾರಿ ರಸ್ತೆ) ಎಂದು ನಾಮಕರಣ ಮಾಡಿದ್ದರು. ಇದೀಗ ಆ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ಹೆಸರು ನಾಮಕರಣ ಮಾಡಲು ಹೊರಟ್ಟಿದ್ದಾರೆ. ಅದಕ್ಕೆ ಇಲ್ಲಿನ ಸ್ಥಳೀಯ ಶಾಸಕರೇ ಸಿದ್ದರಾಮಯ್ಯ ಹೆಸರನ್ನು ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಮೈಸೂರಿನವರಾಗಿದ್ದು, 2 ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಇನ್ನು ಮೈಸೂರಿನಲ್ಲಿ ಸಾಕಷ್ಟು ಬೇರೆ ಬೇರೆ ಮಾರ್ಗವಾಗಿ ರಸ್ತೆಗಳಿದ್ದು, ಅಲ್ಲಿಗೆ ಬೇಕಾದರೆ ಸಿದ್ದರಾಮಯ್ಯ ಹೆಸರನ್ನು ನಾಮಕರಣ ಮಾಡಲಿ ನಮ್ಮ ಅಭ್ಯಂತರವೇನಿಲ್ಲ ಎಂದಿದ್ದಾರೆ.
ರಸ್ತೆಗಳಿಗೆ ಹೆಸರನ್ನು ನಾಮಕರಣ ಮಾಡುವಾಗ ಸಾಮಾನ್ಯವಾಗಿ ಸಾಧನೆ ಮಾಡಿದ ವ್ಯಕ್ತಿಯ ಮರಣದ ಬಳಿಕ ಹೆಸರು ನಾಮಕರಣ ಮಾಡುತ್ತಾರೆ. ಬಹುಶಃ ಸಿದ್ದರಾಮಯ್ಯಗೆ ಹೆಸರು ಬದಲಾವಣೆ ವಿಚಾರ ಗೊತ್ತಿಲ್ಲ ಅನ್ನಿಸುತ್ತದೆ. ಈ ವಿಚಾರ ಗೊತ್ತಾದರೆ ಅವರೇ ಒಪ್ಪಲ್ಲ ಅನ್ನಿಸುತ್ತದೆ. ನಮ್ಮ ಒತ್ತಾಯ ಇಷ್ಟೇ ಆ ರಸ್ತೆಗೆ ಸಿದ್ದರಾಮಯ್ಯ ಹೆಸರು ಬೇಡ
ಬೇರೆ ರಸ್ತೆಗೆ ಸಿದ್ದರಾಮಯ್ಯ ಹೆಸರನ್ನು ನಾಮಕರಣ ಮಾಡಲಿ ಎಂದು ತಿಳಿಸಿದ್ದಾರೆ.
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…
ಹೇಮಂತ್ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…