mysuru nagara
ಮೈಸೂರು: ಮಾನಸಿಕ ಅಸ್ವಸ್ಥನೋರ್ವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಏರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಇಂದು ಕೆ.ಆರ್.ವೃತ್ತಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಾಜಿ ಶಾಸಕ ಎಲ್.ನಾಗೇಂದ್ರ, ಬಿಜೆಪಿ ಮುಖಂಡ ರಘು ಕೌಟಿಲ್ಯ, ಮಾಜಿ ಮೇಯರ್ ಸಂದೇಶ್ ಸ್ವಾಮಿ ಅವರಿಂದು ಕೆ.ಆರ್.ವೃತ್ತಕ್ಕೆ ಭೇಟಿ ನೀಡಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಯನ್ನು ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಮಾಜಿ ಶಾಸಕ ಎಲ್.ನಾಗೇಂದ್ರ ಅವರು, ಈ ಘಟನೆಯಲ್ಲಿ ಪೊಲೀಸರ ವೈಫಲ್ಯ ಎದ್ದು ಕಾಣುತ್ತಿದೆ. ಈ ಮೂಲಕ ಜಿಲ್ಲಾಡಳಿತ ಮೈಸೂರು ರಾಜರಿಗೆ ಅಪಮಾನ ಮಾಡಿದಂತಾಗಿದೆ. ಕೂಡಲೇ ಈ ಘಟನೆ ಕುರಿತು ಪಾಲಿಕೆ ಹಾಗೂ ಜಿಲ್ಲಾಡಳಿತ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಇನ್ನು ನಗರದಲ್ಲಿರುವ ಪ್ರತಿಮೆಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಇನ್ನು ಮುಂದಾದರೂ ಪ್ರತಿಮೆಗಳ ಬಳಿ ಸಿಸಿ ಕ್ಯಾಮರಾ ಅಳವಡಿಸಿ, ವಾಚ್‌ಮ್ಯಾನ್‌ಗಳನ್ನು ನಿಯೋಜಿಸಬೇಕು. ನಗರದ ಹೃದಯ ಭಾಗದಲ್ಲಿರುವ ಪ್ರತಿಮೆಗೆ ಪೊಲೀಸರಿಂದ ರಕ್ಷಣೆ ನೀಡಲಾಗಿಲ್ಲ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…