ಮೈಸೂರು ನಗರ

ತಂತ್ರಜ್ಞಾನದ ಮಾಹಿತಿ ಕೊರತೆ ರೇಷ್ಮೆ ಕೃಷಿಯ ಹಿನ್ನಡೆಗೆ ಕಾರಣ: ಪ್ರೊ. ಎಸ್.ಆರ್.ನಿರಂಜನ

ಮೈಸೂರು : ರೇಷ್ಮೆ ಕೃಷಿಯ ವಿಚಾರಗಳನ್ನು ತಿಳಿದುಕೊಳ್ಳದವರು ಪ್ರಾಯೋಗಿಕವಾಗಿ ಬೆಳೆಯಲಾರರು. ಹವಾಮಾನ ವೈಪರೀತ್ಯ, ತಂತ್ರಜ್ಞಾನದ ಮಾಹಿತಿ ಕೊರತೆ ರೇಷ್ಮೆ ಕೃಷಿಯ ಹಿನ್ನಡೆಗೆ ಕಾರಣ ಎಂದು ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ. ಎಸ್.ಆರ್.ನಿರಂಜನ ಹೇಳಿದರು.

ನಗರದ ಮಾನಸ ಗಂಗೋತ್ರಿಯ ಮೈಸೂರು ವಿಶ್ವವಿದ್ಯಾನಿಲಯದ ರೇಷ್ಮೆ ಕೃಷಿ ವಿಜ್ಞಾನ ಅಧ್ಯಯನ ವಿಭಾಗ ಮತ್ತು ಮಾಳವಿಯ ಮಿಷನ್ ಶಿಕ್ಷಕರ ತರಬೇತಿ ಕೇಂದ್ರದ ವತಿಯಿಂದ ಶನಿವಾರ ಆಯೋಜಿಸಿದ್ದ ‘ರೇಷ್ಮೆ ಕೃಷಿ ತಾಂತ್ರಿಕತೆಗಳ ಕುರಿತು ರಾಷ್ಟ್ರೀಯ ಪ್ರಾಯೋಗಿಕ ತರಬೇತಿ ಕಾಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶೈಕ್ಷಣಿಕ ಸಮಯದಲ್ಲಿ ಪ್ರಾಯೋಗಿಕ ಅವಕಾಶ ದೊರೆತರೆ, ಆ ಅನುಭವ ಕೃಷಿ ಭೂಮಿಯಲ್ಲಿ ಸಹಾಯ ಮಾಡುತ್ತದೆ. ಕೃಷಿಯಲ್ಲಿ ಮಣ್ಣಿನ ಪರೀಕ್ಷೆ ಮುಂತಾದ ವೈಜ್ಞಾನಿಕತೆ ಅಳವಡಿಕೆಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ರೇಷ್ಮೆ ಕೃಷಿಯನ್ನು ವೈಜ್ಞಾನಿಕವಾಗಿ ಕೈಗೊಂಡರೆ ವರ್ಷದಲ್ಲಿ ಆರರಿಂದ ಏಳು ಬೆಳೆ ಪಡೆಯಬಹುದು. ರೇಷ್ಮೆಗೂಡಿಗೆ ನಿಖರವಾದ ಬೆಲೆ ಕೂಡ ಸಿಗಲಿದೆ. ಹಾಗಾಗಿ ರೈತರು ಸಾಂಪ್ರದಾಯಿ ಬೆಳೆಗೆ ಬದಲಾಗಿ ರೇಷ್ಮೆ ಬೆಳೆಯತ್ತ ಆಸಕ್ತಿ ವಹಿಸಬೇಕು. ಉತ್ತಮ ಗುಣಮಟ್ಟದ ಬೈವೋಲ್ಟೀನ್ ರೇಷ್ಮೆ ಉತ್ಪಾದನೆಯಲ್ಲಿ ರಾಜ್ಯ ಮುಂಚೂಣಿಯಲ್ಲಿದೆ. ಹಲವು ರೇಷ್ಮೆ ಕೃಷಿಕರು ವಾರ್ಷಿಕ ಆದಾಯವನ್ನು ಗಳಿಸುತ್ತಿದ್ದಾರೆ ಎಂದು ತಿಳಿಸಿದರು.

ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ ಎನ್.ಕೆ.ಲೋಕನಾಥ್ ಮಾತನಾಡಿ, ರೇಷ್ಮೆ ಉತ್ಪಾದನೆಯಲ್ಲಿ ಭಾರತವು ಪ್ರಪಂಚದಲ್ಲಿ ಎರಡನೆಯ ಸ್ಥಾನದಲ್ಲಿದ್ದು, 2024-25ರ ಆರ್ಥಿಕ ವರ್ಷದಲ್ಲಿ 41.121 ಮೆಟ್ರಿಕ್‌ನಷ್ಟು ಉತ್ಪಾದನೆಯಾಗಿದ್ದು ಇದರಲ್ಲಿ ಹಿಪ್ಪು ನೇರಳೆ ರೇಷ್ಮೆಯು ಶೇ.75ರಷ್ಟು ಮತ್ತು ಹಿಪ್ಪು ನೇರಳೇತರ ರೇಷ್ಮೆಯು ಶೇ.25ರಷ್ಟು ಪಾಲಿರುತ್ತದೆ. ಭಾರತದ ಗ್ರಾಮೀಣ ಪ್ರದೇಶಗಳಲ್ಲಿ ರೇಷ್ಮೆ ಕೃಷಿ ಮತ್ತು ರೇಷ್ಮೆ ಕೈಗಾರಿಕಾ ಚಟುವಟಿಕೆಗಳಿಂದ ವಾರ್ಷಿಕವಾಗಿ ಸುಮಾರು 92ಲಕ್ಷ ಜನಕ್ಕೆ ಉದ್ಯೋಗವಕಾಶಗಳು ದೊರೆಯುತ್ತಿವೆ ಎಂದು ವಿವರಿಸಿದರಲ್ಲದೆ, ರೇಷ್ಮೆ ಕೃಷಿಯನ್ನು ಉದ್ಯಮವನ್ನಾಗಿಸಲು ಈ ವಿಚಾರ ಸಂಕಿರಣವು ಸೂರ್ತಿಯಾಗಿರುತ್ತದೆ ಎಂಬುದಾಗಿ ಭಾವಿಸುತ್ತೇನೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ರೇಷ್ಮೆ ಕೃಷಿ ವಿಜ್ಞಾನ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ.ಬಿ. ಸಣ್ಣಪ್ಪ, ಸಂಘಟನಾ ಕಾರ್ಯದರ್ಶಿ ಪ್ರೊ ಎಂ.ಎನ್.ಅನಿಲ್ ಕುಮಾರ್ ಇದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಪ್ರಚಂಡ ಬಹುಮತದಿಂದ ಬಿಜೆಪಿ ಗೆಲ್ಲಲಿದೆ: ಅಮಿತ್‌ ಶಾ ವಿಶ್ವಾಸ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಚುನಾವಣೆ ನಡೆದ 152 ಸ್ಥಾನಗಳಲ್ಲಿ 110ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು…

26 mins ago

ಹೂಗ್ಲಿ ನದಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೋಣಿ ವಿಹಾರ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮೊದಲ ಹಂತದ ಚುನಾವಣೆ ಮುಗಿದಿದೆ. ಚುನಾವಣೆ ಮುಗಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು…

1 hour ago

ವಿಜೃಂಭಣೆಯಿಂದ ನಡೆದ ರಂಗನಾಥಸ್ವಾಮಿ ರಂಗಮುಡಿ ಉತ್ಸವ

ಶ್ರೀರಂಗಪಟ್ಟಣ: ಇಲ್ಲಿನ ಐತಿಹಾಸಿಕ ಶ್ರೀರಂಗನಾಥಸ್ವಾಮಿ ರಂಗಮುಡಿ ಉತ್ಸವ ಗುರುವಾರ(23-04-2026) ರಾತ್ರಿ ಸಂಭ್ರಮದಿಂದ ನೆರವೇರಿತು. ಮೇಷ ಮಾಸ, ಶುಕ್ಲಪಕ್ಷ, ಸಪ್ತಮಿ ದಿನದಂದು…

2 hours ago

ಕಾಡಾನೆ ದಾಳಿ: ರೈತನಿಗೆ ಗಂಭೀರ ಗಾಯ

ಎಚ್‌.ಡಿ.ಕೋಟೆ: ತಾಲ್ಲೂಕಿನ ಹಂಪಾಪುರ ಗ್ರಾಮದ ಸಮೀಪ ಇಂದು ಬೆಳಿಗ್ಗೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ರೈತ ಸಿದ್ದೇಗೌಡ ಎಂಬುವವರಿಗೆ ಗಂಭೀರ…

2 hours ago

ಮಂತ್ರಾಲಯದಲ್ಲಿ 22 ದಿನದಲ್ಲಿ 3.25 ಕೋಟಿ ಕಾಣಿಕೆ ಸಂಗ್ರಹ

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಏಪ್ರಿಲ್‌ ತಿಂಗಳಿನ 22 ದಿನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 3.25…

3 hours ago

ರಾಜ್ಯದಲ್ಲಿ ಏಪ್ರಿಲ್.‌29ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್.‌29ರವರೆಗೆ ಹಾಗೂ ಬೆಂಗಳೂರಿನಲ್ಲಿ ಮೇ.5ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಬೇಗೆಯಿಂದ…

3 hours ago