Mysore
22
broken clouds

Social Media

ಸೋಮವಾರ, 02 ಫೆಬ್ರವರಿ 2026
Light
Dark

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಪ್ರತೀ ದಿನ ಕನಿಷ್ಠ 8 ತಾಸುಗಳ ಕಾಲ ನಗರದ ಪ್ರಮುಖ ಸ್ಥಳಗಳಲ್ಲಿ ಪರಿಶೀಲನೆ ನಡೆಸುವಂತೆ ಆಯಾ ಠಾಣೆಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಅದರಂತೆ ಭಾನುವಾರ ರಾತ್ರಿಯಿಂದಲೇ ಕಾರ್ಯಾಚರಣೆ ನಡೆಸಿದ ಪೊಲೀಸರು, ನಗರಕ್ಕೆ ಬರುವ ವಾಹನಗಳನ್ನು ಪ್ರಮುಖ ರಸ್ತೆಗಳಲ್ಲಿ ನಿಲ್ಲಿಸಿ ತಪಾಸಣೆ ನಡೆಸಿದ್ದಾರೆ. ವಿಶೇಷವಾಗಿ ಅನ್ಯರಾಜ್ಯಗಳ ವಾಹನಗಳ ಮೇಲೆ ತೀವ್ರ ನಿಗಾ ವಹಿಸಿ ತಪಾಸಣೆ ನಡೆಸುತ್ತಿದ್ದಾರೆ.

ನಗರದ ಕೈಗಾರಿಕಾ ಬಡಾವಣೆಗಳು, ರಾಸಾಯನಿಕ ಕಾರ್ಖಾನೆಗಳು, ಜನನಿಬಿಡ ಪ್ರದೇಶದಿಂದ ದೂರವಿರುವ ಒಂಟಿ ಮನೆಗಳ ಪರಿಶೀಲನೆಗೆ ಪೊಲೀಸರು ಒತ್ತು ನೀಡಿದ್ದಾರೆ. ಹೊರ ವರ್ತುಲ ರಸ್ತೆಯ ಅಂಚಿನಲ್ಲಿ ಇರುವ ಶೆಡ್‌ಗಳು ಹಾಗೂ ಮನೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಇದಕ್ಕಾಗಿ ಸಂಚಾರ ವಿಭಾಗ, ಶ್ವಾನದಳ, ಅಪರಾಧ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸರನ್ನು ಅಧಿಕಾರಿಗಳೊಂದಿಗೆ ಜೋಡಿಸಿದ್ದಾರೆ. ಪ್ರತೀ ದಿನ ಬೆಳಿಗ್ಗೆ 4 ತಾಸು ಹಾಗೂ ಸಂಜೆ ನಂತರ ನಾಲ್ಕು ತಾಸು ಪರಿಶೀಲನಾ ಕಾರ್ಯ ನಡೆಯಲಿದೆ. ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಆಯುಕ್ತರು ಮನವಿ ಮಾಡಿದ್ದಾರೆ.

 

Tags:
error: Content is protected !!