ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಪ್ರತೀ ದಿನ ಕನಿಷ್ಠ 8 ತಾಸುಗಳ ಕಾಲ ನಗರದ ಪ್ರಮುಖ ಸ್ಥಳಗಳಲ್ಲಿ ಪರಿಶೀಲನೆ ನಡೆಸುವಂತೆ ಆಯಾ ಠಾಣೆಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಅದರಂತೆ ಭಾನುವಾರ ರಾತ್ರಿಯಿಂದಲೇ ಕಾರ್ಯಾಚರಣೆ ನಡೆಸಿದ ಪೊಲೀಸರು, ನಗರಕ್ಕೆ ಬರುವ ವಾಹನಗಳನ್ನು ಪ್ರಮುಖ ರಸ್ತೆಗಳಲ್ಲಿ ನಿಲ್ಲಿಸಿ ತಪಾಸಣೆ ನಡೆಸಿದ್ದಾರೆ. ವಿಶೇಷವಾಗಿ ಅನ್ಯರಾಜ್ಯಗಳ ವಾಹನಗಳ ಮೇಲೆ ತೀವ್ರ ನಿಗಾ ವಹಿಸಿ ತಪಾಸಣೆ ನಡೆಸುತ್ತಿದ್ದಾರೆ.
ನಗರದ ಕೈಗಾರಿಕಾ ಬಡಾವಣೆಗಳು, ರಾಸಾಯನಿಕ ಕಾರ್ಖಾನೆಗಳು, ಜನನಿಬಿಡ ಪ್ರದೇಶದಿಂದ ದೂರವಿರುವ ಒಂಟಿ ಮನೆಗಳ ಪರಿಶೀಲನೆಗೆ ಪೊಲೀಸರು ಒತ್ತು ನೀಡಿದ್ದಾರೆ. ಹೊರ ವರ್ತುಲ ರಸ್ತೆಯ ಅಂಚಿನಲ್ಲಿ ಇರುವ ಶೆಡ್‌ಗಳು ಹಾಗೂ ಮನೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಇದಕ್ಕಾಗಿ ಸಂಚಾರ ವಿಭಾಗ, ಶ್ವಾನದಳ, ಅಪರಾಧ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸರನ್ನು ಅಧಿಕಾರಿಗಳೊಂದಿಗೆ ಜೋಡಿಸಿದ್ದಾರೆ. ಪ್ರತೀ ದಿನ ಬೆಳಿಗ್ಗೆ 4 ತಾಸು ಹಾಗೂ ಸಂಜೆ ನಂತರ ನಾಲ್ಕು ತಾಸು ಪರಿಶೀಲನಾ ಕಾರ್ಯ ನಡೆಯಲಿದೆ. ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಆಯುಕ್ತರು ಮನವಿ ಮಾಡಿದ್ದಾರೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…