ಮೈಸೂರು ನಗರ

ಸಿಎಂ ಸಿದ್ದು ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ದೂರುದಾರ ವಕೀಲ ಪ್ರದೀಪ್‌ ಕುಮಾರ್‌ ಪಟ್ಟು

ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ತನಿಖೆಗೆ ರಾಜ್ಯಪಾಲರು ನೀಡಿದ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸುವಂತೆ ದೂರುದಾರ ವಕೀಲ ಪ್ರದೀಪ್ ಕುಮಾರ್ ಪಟ್ಟು ಹಿಡಿದಿದ್ದು, ಮೈಸೂರಿನ ಲೋಕಾಯುಕ್ತ ಎಸ್ಪಿ ಟಿ.ಜೆ.ಉದೇಶಗೆ ದೂರು ನೀಡಿದ್ದಾರೆ. ಈ ವೇಳೆ ದೂರಿಗೆ ಸ್ವೀಕೃತ ಪತ್ರ ಕೊಟ್ಟಿರುವ ಲೋಕಾಯುಕ್ತ ಎಸ್ಪಿ ವಿರುದ್ಧ ಪ್ರದೀಪ್‌ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಎಸ್ಪಿ ಜೊತೆಗೆ ಕೂಗಾಟ ನಡೆಸಿದ ಪ್ರದೀಪ್‌ ಕುಮಾರ್‌ ಅವರು, ನಾನು ಮೂರು ಭಾರಿ ದೂರು ಕೊಟ್ಟಿದ್ದೇನೆ. ಯಾವುದಕ್ಕೂ ಹಿಂಬರಹ ಕೊಟ್ಟಿಲ್ಲ, ಕೇವಲ ಸ್ವೀಕೃತ ಅಷ್ಟೇ ಕೊಡುತ್ತಿದ್ದಾರೆ. ಈಗಲೂ ನಿಮಗೆ ಕಳುಹಿಸುತ್ತೇವೆ ಅಂತಿದ್ದಾರೆ. ನನಗೆ ಹಿಂಬರಹ ಬೇಕೇ ಬೇಕು ಎಂದು ಪಟ್ಟು ಹಿಡಿದಿದ್ದೇನೆ. ಅರ್ಧ ಗಂಟೆಗಳ ಕಾಲ ಕಾಲಾವಕಾಶ ಕೇಳಿದ್ದೇನೆ. ಹಿಂಬರಹ ಕೊಡುವವರೆಗೆ ನಾನು ಲೋಕಾಯುಕ್ತ ಕಚೇರಿ ಬಿಟ್ಟು ಹೋಗಲ್ಲ. ನಾನು ಈ ಸ್ಥಳದಲ್ಲೇ ಧರಣಿ ಮಾಡುತ್ತೇನೆ. ಹೈಕೋರ್ಟ್ ಆದೇಶದಲ್ಲಿ ಸ್ಪಷ್ಟವಾಗಿ ಹೇಳಿದೆ. 17ಎ ಅಡಿಯಲ್ಲಿ ತನಿಖಾಧಿಕಾರಿ ಸ್ವತಂತ್ರವಾಗಿ ತನಿಖೆ ಮಾಡಬಹುದು ಎಂದಿದ್ದಾರೆ. ಈ ಅಂಶದ ಆಧಾರದ ಮೇಲೆ ನನ್ನ ದೂರಿನ ಅನ್ವಯ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲು ಮಾಡಬಹುದು. ಸಿದ್ದರಾಮಯ್ಯ, ಯತೀಂದ್ರ ಸಿದ್ದರಾಮಯ್ಯ, ಪಾರ್ವತಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಸ್ವಾಮಿ ಸೇರಿದಂತೆ ಇತರ ಅಧಿಕಾರಿಗಳ ಮೇಲೆ ಎಫ್ಐಆರ್ ದಾಖಲು ಮಾಡಬೇಕು. ಲೋಕಾಯುಕ್ತ ಅಧಿಕಾರಿಗಳ ನಡೆಯನ್ನ ಗಮನಿಸಿದರೆ ಸಿಎಂ ಅವರ ಒತ್ತಡಕ್ಕೆ ಒಳಗಾದಂತೆ ಕಾಣುತ್ತಿದೆ. ನಾನು ಈ ಬಗ್ಗೆ ಹೈಕೋರ್ಟ್ನಲ್ಲಿ ರಿಟ್ ಸಲ್ಲಿಸುವ ಚಿಂತನೆಯಲ್ಲಿದ್ದೇನೆ ಎಂದು ಕಿಡಿಕಾರಿದರು.

ಕೆ.ಬಿ. ರಮೇಶ ನಾಯಕ

ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ನಾನು ಮೂಲತಃ ಚಾಮರಾಜನಗರ ತಾಲ್ಲೂಕು ಮತ್ತು ಜಿಲ್ಲೆಯ ಕಣ್ಣೇಗಾಲ ಗ್ರಾಮದವನು. ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಪ್ರಾಥಮಿಕ,ಪ್ರೌಢಶಿಕ್ಷಣ, ಚಾಮರಾಜನಗರದಲ್ಲಿ ಪಿಯುಸಿ ವ್ಯಾಸಂಗ ಮಾಡಿದ ನಾನು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದೇನೆ. 1992ರಿಂದ 2002ರವರೆಗೆ ಮೈಸೂರು ಮಿತ್ರ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಸೇವೆ ಸಲ್ಲಿಸಿದ ಬಳಿಕ 2002ರಿಂದ 2012ರವರೆಗೆ ಸಂಯುಕ್ತ ಕರ್ನಾಟಕ ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ವರದಿಗಾರನಾಗಿ, 2013ರಿಂದ 2015ರವರೆಗೆ ಹಾಸನ ಮತ್ತು ಮೈಸೂರಿನಲ್ಲಿ ವಿಜಯ ಕರ್ನಾಟಕ ಹಿರಿಯ ವರದಿಗಾರನಾಗಿ, 2015ರಿಂದ 2017ರವರೆಗೆ ಸಂಯುಕ್ತ ಕರ್ನಾಟಕ ಮುಖ್ಯ ವರದಿಗಾರನಾಗಿ, 2017ರಿಂದ 2020 ಜೂನ್‌ವರಗೆ ವಿಶ್ವವಾಣಿ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸಿದ್ದೇನೆ.

Recent Posts

ಮಾರ್ಚ್.‌30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

ಬೆಂಗಳೂರು: ಮಾರ್ಚ್.‌30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾರ್ಚ್.‌31ಕ್ಕ ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಪರೀಕ್ಷಾ ಬೋರ್ಡ್‌ ಮಾಹಿತಿ ನೀಡಿದ್ದು,…

5 mins ago

1ನೇ ತರಗತಿ ಪ್ರವೇಶ: 6 ವರ್ಷ ಕಡ್ಡಾಯ ನಿಯಮದಲ್ಲಿ 60 ದಿನಗಳ ವಿನಾಯಿತಿ

ಬೆಂಗಳೂರು: ಆರು ವರ್ಷ ತುಂಬದ ಮಕ್ಕಳ ಪೋಷಕರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಒಂದನೇ ತರಗತಿಗೆ 6 ವರ್ಷ ತುಂಬಬೇಕೆಂಬ…

23 mins ago

ಬಜೆಟ್‌ ಕುರಿತು ನಡೆದ ಚರ್ಚೆಯ ಮೇಲಿನ ಉತ್ತರ ಪ್ರಮುಖ ಅಂಶಗಳಿವು.!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ವಿಧಾನಪರಿಷತ್ತಿನಲ್ಲಿ ಬಜೆಟ್ ಕುರಿತು ನಡೆಸಿದ ಚರ್ಚೆಯ ಮೇಲಿನ ಉತ್ತರದ ಪ್ರಮುಖ ಅಂಶಗಳು ಈ ಕೆಳಕಂಡಂತಿವೆ.…

39 mins ago

ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಿಸಲು ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ವನ್ಯಜೀವಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬದ ವಾರಸುದಾರರಿಗೆ ಸರ್ಕಾರಿ ನೌಕರಿ ನೀಡಲು ಸರ್ಕಾರಿ ಆದೇಶದನ್ವಯ ಅವಕಾಶ ಇರುವುದಿಲ್ಲ ಎಂದು ಅರಣ್ಯ,…

50 mins ago

ಹಾರ್ಮುಜ್‌ ಜಲಸಂಧಿ ಮುಚ್ಚಲು ಕಾರಣರಾಗಿದ್ದ ಇರಾನ್‌ ನೌಕಾ ಕಮಾಂಡರ್‌ ಹತ್ಯೆ

ಜೆರುಸೇಲಂ: ಬಂದರ್‌ ಅಬ್ಬಾಸ್‌ನಲ್ಲಿ ಅಮೇರಿಕಾ-ಇಸ್ರೇಲಿ ದಾಳಿಯಲ್ಲಿ ಇಸ್ಲಾಮಿಕ ರೆವಲ್ಯೂಷನರಿ ಗಾರ್ಡ್‌ ಕಾಪ್ಸ್‌ ನೌಕಾ ಕಮಾಂಡರ್‌ ಅಲಿರೆಜಾ ತಂಗ್‌ ಸಿರಿ ಮೃತಪಟ್ಟಿದ್ದಾರೆ.…

1 hour ago

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್‌ ತುರ್ತು ನೋಟಿಸ್‌

ಬೆಂಗಳೂರು: ಮೈಸೂರು ಮುಡಾ ಅಕ್ರಮ ಸೈಟ್‌ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ…

1 hour ago