ಮೈಸೂರು: ಹೊಸ ವರ್ಷಾಚರಣೆ ದಿನದಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡಿ ತಾಯಿಯ ದರ್ಶನ ಪಡೆಯಲು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದರಿಂದ, ಯಾವುದೇ ರೀತಿಯ ತೊಂದರೆಗಳು ಉಂಟಾಗದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಸೂಚನೆ ನೀಡಿದ್ದಾರೆ.
ಜಿಲ್ಲಾ ಪಂಚಾಯಿತಿಯಲ್ಲಿ ಇಂದು(ಡಿಸೆಂಬರ್.30) ನಡೆದ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಮೂಲಭುತ ಸೌಲಭ್ಯಗಳನ್ನು ಒದಗಿಸುವ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚಾಮುಂಡಿ ಬೆಟ್ಟಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದರಿಂದ ಪೊಲೀಸ್ ಇಲಾಖೆಯ ಅಧಿಕಾರಿಗಳು ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು. ಅಲ್ಲದೇ ವಾಹನ ಸಂಚಾರ ನಿಯಂತ್ರಣ ಮಾಡಿ, ಚಾಮುಂಡಿ ಬೆಟ್ಟಕ್ಕೆ ಬರುವ ಎಲ್ಲಾ ಗೇಟ್‌ಗಳಲ್ಲಿ ಪೊಲೀಸ್ ಸಿಬ್ಬಂದಿಗಳನ್ನು ನೇಮಿಸಬೇಕು. ಜೊತೆಗೆ ಅಂದಿನ ದಿನ ಆಟೋಗಳ ಪ್ರವೇಶವನ್ನು ನಿರ್ಬಂಧಿಸಬೇಕು ಎಂದು ತಿಳಿಸಿದ್ದಾರೆ.
ಇನ್ನು 2025ರ ಜನವರಿ 1 ರಂದು ಸಾರ್ವಜನಿಕರಿಗೆ ಬೆಳಿಗ್ಗೆ 6.30 ಗಂಟೆಯಿಂದಲೇ ದರ್ಶನಕ್ಕೆ ಅವಕಾಶ ನೀಡುವುದರಿಂದ ತಾವರೆಕೆರೆ ಗೇಟ್‌ಅನ್ನು ತೆರೆಯಲಾಗಿದೆ. ಹಾಗಾಗಿ ದರ್ಶನಕ್ಕೆ ಬರುವ ಭಕ್ತಾದಿಗಳು ಪಾರ್ಕಿಂಗ್ ಸ್ಥಳದಿಂದಲೃ ಸರದಿ ಸಾಲಿನಲ್ಲಿ ಚಾಮುಂಡಿ ದೇವಸ್ಥಾನಕ್ಕೆ ಆಗಮಿಸಬೇಕು. ಜೊತೆಗೆ ಬೆಳಿಗ್ಗೆ ತಯಾರು ಮಾಡುವ ಪ್ರಸಾದದ ಗುಣಮಟ್ಟವನ್ನು ಅಧಿಕಾರಿಗಳು ಪರೀಕ್ಷಿಸಿ ಗುಣಮಟ್ಟದ ಪ್ರಮಾಣ ಪತ್ರವನ್ನು ನೀಡಬೇಕು ಎಂದು ಆದೇಶಿಸಿದ್ದಾರೆ.
ಇನ್ನೂ ಚಾಮುಂಡಿ ಬೆಟ್ಟಕ್ಕೆ ಹೊಸ ವರ್ಷದ ದಿನ ಆಟೋ ರಿಕ್ಷಾಗಳಿಗೆ ನಿರ್ಬಂಧಿಸಿರುವ ಕಾರಣ ಕೆಎಸ್‌ಆರ್‌ಟಿಸಿಯ ಅಧಿಕಾರಿಗಳು ಅಗತ್ಯಕ್ಕೆ ಅನುಗುಣವಾಗಿ ಸಾರಿಗೆ ವ್ಯವಸ್ಥೆಯನ್ನು ನಿಯೋಜಿಸಿ ಭಕ್ತಾದಿಗಳಿಂದ ಟಿಕೆಟ್ ಪಡೆಯಬೇಕು. ಅದರ ಜೊತೆಗೆ ನಗರದ ಇತರೆ ಪ್ರದೇಶಗಳಿಂದ ಬೆಟ್ಟಕ್ಕೆ, ನಗರ ಬಸ್ ನಿಲ್ದಾಣ ಹಾಗೂ ರೈಲ್ವೆ ಸ್ಟೇಷನ್‌ನಿಂದ ನೇರವಾಗಿ ಹೆಚ್ಚಿನ ಬಸ್‌ಗಳ ವ್ಯವಸ್ಥೆಯನ್ನು ಕಲ್ಪಿಸಬೇಕು. ಅಲ್ಲದೇ ದಾಸೋಹ ಭವನದಲ್ಲಿ ಭಕ್ತಾದಿಗಳಿಗೆ ಉಚಿತ ಅನ್ನ ದಾಸೋಹ ವ್ಯವಸ್ಥೆಯನ್ನು ಕಲ್ಪಿಸುವವರು ಹಿಂದಿನ ದಿನವೇ ಟ್ಯಾಂಕರ್‌ಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿ ನಿರಂತರವಾಗಿ ನೀರಿನ ಪೂರೈಕೆ ಮಾಡಬೇಕು ಎಂದು ಹೇಳಿದ್ದಾರೆ.
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…