ಮೈಸೂರು: ನಗರದ ಇನ್ಫೋಸಿಸ್ ಕ್ಯಾಂಪಸ್ ಆವರಣದಲ್ಲಿ ನಿನ್ನೆ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ, ಚಿರತೆ ಸೆರೆಗೆ ಅರಣ್ಯಾಧಿಕಾರಿಗಳಿಂದ ಕಾರ್ಯಾಚರಣೆ ಮುಂದುವರೆದಿದ್ದು, ಇಂದು ಕೂಡ ಸಿಬ್ಬಂದಿಗಳಿಗೆ ವರ್ಕ್ ಫ್ರಮ್ ಹೋಮ್ ಘೋಷಿಸಿದ್ದಾರೆ.
ಇನ್ಫೋಸಿಸ್ ಆವರಣದಲ್ಲಿ ನಿನ್ನೆ(ಡಿಸೆಂಬರ್.31) ಚಿರತೆ ಕಾಣಿಸಿಕೊಂಡಿದ್ದು, ಅರಣ್ಯಾಧಿಕಾರಿಗಳು ಚಿರತೆ ಸೆರೆಗಾಗಿ ತೀವ್ರ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಆದರೆ ಚಿರತೆ ಸೆರೆಯಾಗದಿರುವ ಕಾರಣದಿಂದ ಸುರಕ್ಷತೆಯ ಹಿತದೃಷ್ಟಿಯಿಂದ ಮುನ್ನಚ್ಚೆರಿಕೆ ಕ್ರಮ ವಹಿಸಿದ ಸಂಸ್ಥೆಯೂ ಹ್ಯೂಮನ್ ರಿಸೊರ್ಸ್ ವಿಭಾಗದಿಂದ ಮನೆಯಿಂದಲೇ ತಮ್ಮ ಕೆಲಸ ನಿರ್ವಹಿಸುವಂತೆ ಸಿಬ್ಬಂದಿಗೆ ಸೂಚಿಸಿದ್ದಾರೆ.
ಇನ್ಫೋಸಿಸ್ ಆವರಣದಲ್ಲಿ ನಿನ್ನೆ ಬೆಳಿಗ್ಗೆ ಚಿರತೆಯ ಚಲನವಲನ ಕ್ಯಾಂಪಸ್ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಚಿರತೆ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯ ಪ್ರವೃತ್ತರಾಗಿದ್ದು, ಸದ್ಯ ಯಾವುದೇ ಸಿಬ್ಬಂದಿಯನ್ನು ಕ್ಯಾಂಪಸ್ ಒಳಗಡೆ ಬಿಡಲಾಗುವುದಿಲ್ಲ ಎಂದು ಸಂಸ್ಥೆ ಆದೇಶ ಹೊರಡಿಸಿದೆ.