ಮೈಸೂರು ನಗರ

ಅಧಿಕಾರ ಕಿತ್ತಾಟ ಬಿಟ್ಟು ಅಭಿವೃದ್ಧಿ ಚರ್ಚೆ ನಡೆಯಲಿ : ಶಾಸಕ ಜಿ.ಟಿ.ದೇವೇಗೌಡ

ಮೈಸೂರು : ರಾಜ್ಯದಲ್ಲಿ ನಾಯಕತ್ವ, ಅಧಿಕಾರ ಹಂಚಿಕೆ ಕಿತ್ತಾಟ ಬಿಟ್ಟು ರಾಜ್ಯದ ಸರ್ವತೋಮುಖ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯಲಿ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ, ಅಧಿಕಾರ ಹಂಚಿಕೆ ಚರ್ಚೆ ಹೊಸದಾಗಿ ನಡೆಯುತ್ತಿಲ್ಲ. ಮೊದಲಿನಿಂದಲೂ ನಡೆಯುತ್ತಿದೆ. ನಮ್ಮ ಕೈಯಲ್ಲಿ ಇಲ್ಲ, ಅವರ ಕೈಯಲ್ಲಿಯೂ ಇಲ್ಲ. ಅದೆಲ್ಲವೂ ಅವರ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದರು.

ಇದನ್ನೂ ಓದಿ:-ಮೈಸೂರು | ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ!

ಬೆಳಗಾವಿ ಅಧಿವೇಶನದಲ್ಲಿ ನಾಡಿನ ಜನರಿಗೆ ಶಾಂತಿ, ನೆಮ್ಮದಿ ಕೊಡುವ ಬಗ್ಗೆ ಚರ್ಚೆಗಳಾಗಬೇಕು. ಅಧಿಕಾರ ಹಂಚಿಕೆ ಬಿಟ್ಟು ಅಭಿವೃದ್ಧಿ ಬಗ್ಗೆ ಚರ್ಚೆಯಾಗಬೇಕು. ರಾಜ್ಯದ ೨೨೪ ಕ್ಷೇತ್ರದ ಶಾಸಕರು ಒಟ್ಟಾಗಿ ಚರ್ಚೆ ನಡೆಸಬೇಕು. ಅಭಿವೃದ್ಧಿ ಬಗ್ಗೆ ಮಾತನಾಡಬೇಕು. ನಾನು ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಹಲವಾರು ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕಿದ್ದರಿಂದ ಹೋಗಿರಲಿಲ್ಲ. ಮುಂದಿನ ವಾರ ಅಧಿವೇಶನಕ್ಕೆ ಹೋಗುವೆ ಎಂದರು.

ಆಂದೋಲನ ಡೆಸ್ಕ್

Recent Posts

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

9 mins ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

32 mins ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

45 mins ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

53 mins ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

1 hour ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

1 hour ago