ಮೈಸೂರು ನಗರ

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರ ಸಂಘಚಾಲಕ ಮೋಹನ್ ಭಾಗವತ್ ಹೇಳಿದರು.

ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾಮಠದ ಆವರಣದಲ್ಲಿ ಜೆಎಸ್‌ಎಸ್ ಮಹಾವಿದ್ಯಾಪೀಠದ ಸುವರ್ಣ ಮಹೋತ್ಸವದ 15ನೇ ವಿಶೇಷ ಉಪನ್ಯಾಸದಲ್ಲಿ ‘ರಾಷ್ಟ್ರೀಯ ಅಭಿವೃದ್ಧಿಗೆ ಸಾಮಾಜಿಕ ಸೌಹಾರ್ದತೆ ಪ್ರೇರಕ’ ವಿಷಯ ಕುರಿತು ಅವರು ಮಾತನಾಡಿದರು.

ಸಹೋದರರನ್ನು ಅಸ್ಪೃಶ್ಯರಾಗಿ ಶತಮಾನಗಳಿಂದ ದೂರವಿಡಲಾಗಿದೆ. ಹೀಗಾಗಿ ಅಂಬೇಡ್ಕರ್ ಅವರ ಸಂವಿಧಾನ ಸಭೆಯ ಭಾಷಣಗಳನ್ನು ಮತ್ತೊಮ್ಮೆ ಓದಿಕೊಳ್ಳಬೇಕಿದೆ. ರಾಜಕೀಯ ಮತ್ತು ಆರ್ಥಿಕ ಸಮಾನತೆಗಿಂತ ಸಾಮಾಜಿಕ ಸಮಾನತೆ ಮುಖ್ಯ ಎಂದು ಅಂಬೇಡ್ಕರ್ ಪ್ರತಿಪಾದಿಸಿದ್ದಾರೆ. ಸ್ವಾತಂತ್ರ್ಯ ಮತ್ತು ಸಮಾನತೆಯನ್ನು ಬೆಸೆಯುವ ಕೊಂಡಿಯೇ ಬಂಧುತ್ವ. ಈ ಬಂಧುತ್ವ-ಭಾವ ಇಲ್ಲದಿದ್ದರೆ ದೇಶದ ಸ್ವಾತಂತ್ರ್ಯ ಕಾಪಾಡಿಕೊಳ್ಳುವುದು ಕಷ್ಟ ಎಂದರು.

ಭಾಷೆ, ಜಾತಿ, ಪಂಗಡಗಳನ್ನು ಮೀರಿ ಬಂಧುತ್ವ ನೆಲೆಗೊಳ್ಳಬೇಕು. ಅಸ್ತಿತ್ವಕ್ಕಾಗಿ ಮತ್ತೊಬ್ಬರ ವಿರುದ್ಧ ಹೋರಾಟ ನಡೆಸುವುದು ಪಾಶ್ಚಾತ್ಯ ಪರಿಕಲ್ಪನೆಯಾಗಿದೆ. ಆದರೆ, ಭಾರತೀಯರು ಭ್ರಾತೃತ್ವ ಮತ್ತು ಪರಸ್ಪರ ಸಹಾಯದೊಂದಿಗೆ ನಾಗರಿಕತೆ ಕಟ್ಟಿದ್ದಾರೆ. ನಮ್ಮ ಸಮಾಜವು, ಪರೋಪಕಾರವೇ ಸೇವೆ, ಕರ್ತವ್ಯವೇ ಜೀವನದ ಪರಮ ಗುರಿಯೆಂದು ತಿಳಿದಿದೆ ಎಂದು ವಿವರಿಸಿದರು.

ಪಾಶ್ಚಾತ್ಯ ದೇಶಗಳಲ್ಲಿ ಸೊಸೈಟಿ ಎಂಬ ಪರಿಕಲ್ಪನೆ ಸಾಮಾಜಿಕ ಒಪ್ಪಂದದ ಸಿದ್ಧಾಂತದ ಮೇಲೆ ನಿರ್ಮಾಣವಾಗಿದೆ. ಅಲ್ಲಿ ಜನರು ಪರಸ್ಪರ ಸಹಕಾರ ಮತ್ತು ಲಾಭದ ಉದ್ದೇಶದಿಂದ ಒಟ್ಟಿಗೆ ಬದುಕುತ್ತಾರೆ. ಆದರೆ, ಭಾರತೀಯ ಸಮಾಜದ ಪರಿಕಲ್ಪನೆ ಅದಕ್ಕಿಂತ ಭಿನ್ನವಾಗಿದೆ. ಭಾರತದಲ್ಲಿ ಸಮಾಜವೆಂದರೆ ಕೇವಲ ಜನರ ಗುಂಪು ಅಥವಾ ಒಪ್ಪಂದದ ಆಧಾರದ ಮೇಲೆ ನಿರ್ಮಾಣವಾದ ವ್ಯವಸ್ಥೆಯಲ್ಲ, ದೀರ್ಘಕಾಲ ಒಟ್ಟಿಗೆ ಬದುಕಿ, ಪರಸ್ಪರ ಆತ್ಮೀಯತೆ, ಒಂದೇತನದ ಭಾವನೆ ಹಾಗೂ ಸಾಮೂಹಿಕ ಗುರಿಯನ್ನು ಹೊಂದಿರುವ ಜನರ ಸಮೂಹವೇ ಸಮಾಜ. ಕುಟುಂಬದಿಂದ ಆರಂಭವಾಗುವ ಈ ಒಗ್ಗಟ್ಟು ಪರಿಸರ, ಸಂಸ್ಕೃತಿ ಮತ್ತು ಜೀವನ ಮೌಲ್ಯಗಳ ಮೂಲಕ ವಿಸ್ತಾರಗೊಳ್ಳುತ್ತದೆ ಎಂದರು.

ನೀವು ನನಗೆ ಉಪಾಕಾರ ಮಾಡಿದರೂ ಮಾಡದಿದ್ದರೂ ನೀವು ನನ್ನವರೇ. ಆದ್ದರಿಂದ ನಾನು ಮಾಡುವ ಪ್ರತಿಯೊಂದು ಕಾರ್ಯವೂ ಇತರರ ಹಿತಕ್ಕಾಗಿ ಇರಬೇಕು ಎಂಬುದು ಭಾರತೀಯ ಸಮಾಜದ ಮೂಲ ಭಾವನೆ. ಪರೋಪಕಾರ ಮತ್ತು ಸೇವೆಯ ಮೌಲ್ಯಗಳೊಂದಿಗೆ ಉನ್ನತ ಜೀವನ ಸಾಽಸುವುದೇ ಭಾರತೀಯ ಸಮಾಜದ ಗುರಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ರಾಷ್ಟ್ರವೆಂದರೆ ಕೇವಲ ರಾಜಕೀಯ ವ್ಯವಸ್ಥೆ ಅಥವಾ ಭೌಗೋಳಿಕ ಗಡಿಯಲ್ಲ. ಭೂಮಿ, ಜನರು, ಸಂಸ್ಕೃತಿ ಮತ್ತು ಸಾಮೂಹಿಕ ಚೇತನವೇ ರಾಷ್ಟ್ರದ ಮೂಲ ಅಂಶಗಳಾಗಿವೆ. ಭಾರತದಲ್ಲಿ ವಿವಿಧ ಆಡಳಿತ ವ್ಯವಸ್ಥೆ ಗಳು ಮತ್ತು ರಾಜ್ಯಗಳು ಇದ್ದರೂ ದೇಶದ ಏಕತೆಯ ಭಾವನೆ ಭೂಮಿಯೊಂದಿಗೆ ಹೊಂದಿರುವ ಆತ್ಮೀಯ ಸಂಬಂಧದಿಂದಲೇ ರೂಪುಗೊಂಡಿದೆ ಎಂದು ವಿಶ್ಲೇಷಿಸಿದರು.

ಭಾರತೀಯ ಸಮಾಜದ ಮೂಲಭೂತ ತತ್ವ ಅಂತರಂಗದಲ್ಲಿ ಏಕತೆ ಸಾಧಿಸುವುದೇ ಆಗಿದೆ. ಮಾನವ, ಸಮಾಜ ಮತ್ತು ಸೃಷ್ಟಿ ಪರಸ್ಪರ ಸಂಬಂಧ ಹೊಂದಿವೆ. ಮನುಷ್ಯ ಕೇವಲ ದೇಹ ಅಥವಾ ಮನಸ್ಸಲ್ಲ; ಆತ್ಮ ಎಂಬ ಶಕ್ತಿಯು ಇವೆಲ್ಲವನ್ನೂ ಒಂದಾಗಿ ಕಟ್ಟುತ್ತದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

10 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

16 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

16 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

17 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

18 hours ago