ಮೈಸೂರು: ರಾಜ್ಯಪಾಲರ ನಡೆ ಖಂಡಿಸಿ ಮೈಸೂರು ನಗರ ಕಾಂಗ್ರೆಸ್ ಸಮಿತಿ ವತಿಯಿಂದ ರಾಷ್ಟ್ರಪತಿಗಳಿಗೆ ಪತ್ರ ಚಳುವಳಿ ನಡೆಸಲಾಯಿತು.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ 550 ಎಕರೆ ಜಮೀನನ್ನು ಗಣಿಗಾರಿಕೆ ನಡೆಸಲು ಅಕ್ರಮವಾಗಿ ಮಂಜೂರು ಮಾಡಿದ್ದಾರೆ. ಈ ಬಗ್ಗೆ ಕರ್ನಾಟಕ ಲೋಕಾಯುಕ್ತರು ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.
ಆದರೆ ರಾಜ್ಯಪಾಲರು ಕುಮಾರಸ್ವಾಮಿ ವಿರುದ್ಧ ಅಕ್ರಮದ ತನಿಖೆ ನಡೆಸಲು ಅನುಮತಿ ನೀಡದೇ ಕಾಲ ವಿಳಂಬ ಮಾಡುತ್ತಿದ್ದಾರೆ.
ಈ ನಡೆಯನ್ನು ಖಂಡಿಸಿ ರಾಷ್ಟ್ರಪತಿಗಳಿಗೆ ಮೈಸೂರು ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪತ್ರ ಚಳುವಳಿ ನಡೆಸಲಾಯಿತು.
ಈ ವೇಳೆ ಮೈಸೂರು ನಗರ ವಕ್ತಾರ ಎಸ್.ರಾಜೇಶ್, ಶೋಷಿತ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ರಾಜೇಂದ್ರ ಪಾಂಡವಪುರ, ರಂಗಸ್ವಾಮಿ, ಎಸ್.ಎ.ರಹೀಂ, ಸಿದ್ದರಾಜು, ರಾಜಣ್ಣ, ಕುಮಾರ್ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.





