ಮೈಸೂರು: ಸದಾ ನಮ್ಮನ್ನು ಸಲಹುತ್ತಿರುವ ಭಗವಂತನ ಧ್ಯಾನ, ಜಪ, ತಪ ಮಾಡುವುದರಿಂದ ನಮ್ಮ ಬದುಕು ಕೂಡಾ ಸಾರ್ಥಕವಾಗುತ್ತದೆ ಎಂದು ಶ್ರೀ ಅದಮಾರು ಮಠದ ಪೀಠಾಧೀಶರಾದ ವಿದ್ಯಾಪ್ರಿಯಾತೀರ್ಥ ಸ್ವಾಮೀಜಿ ಹೇಳಿದರು.
ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣ ಧಾಮದಲ್ಲಿ ಶ್ರೀ ಕೃಷ್ಣ ಟ್ರಸ್ಟ್ ಹಾಗೂ ಶ್ರೀ ಕೃಷ್ಣ ಮಿತ್ರ ಮಂಡಳಿಯ ವತಿಯಿಂದ ಭಕ್ತರ ಸಮಕ್ಷಮದಲ್ಲಿ ಮಹಾಮೃತ್ಯುಂಜಯ ಹೋಮ ನೆರವೇರಿತು ಅವರು ಆಶೀರ್ವಚನ ನೀಡಿದರು.
ಭಗವಂತನ ಶಾಂತ ಕೃಪಾದೃಷ್ಟಿ ನಮ್ಮ ಮೇಲೆ ಬೀಳಲಿ ಎನ್ನುವ ಉದ್ದೇಶದಿಂದ ನಾವೆಲ್ಲ ದೇವಸ್ಥಾನಗಳಿಗೆ ಹೋಗುತ್ತೇವೆ. ಭಗವಂತನ ಸ್ಮರಣೆ ಎಷ್ಟು ಮಾಡಿದರೂ ಕಡಿಮೆಯೇ. ಮನುಷ್ಯನ ನೆಮ್ಮದಿಗೆ ಭಗವಂತನೇ ಹಾದಿ ಎಂದರು.
ವಿದ್ಯಾಪ್ರಿಯಾತೀರ್ಥ ಸ್ವಾಮೀಜಿ ಅವರು 7 ದಿನಗಳ ಪ್ರವಚನದ ಮಂಗಳ ನೇರವೆರಿಸಿದರು.
ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಟ್ರಸ್ಟ್‌ನ ಉಪಾಧ್ಯಕ್ಷರುಗಳಾದ ರವಿಶಾಸ್ತ್ರಿ ಮತ್ತು ಪಿ ಎಸ್ ಶೇಖರ್, ಕಾರ್ಯದರ್ಶಿಗಳಾದ ಕೆ ವಿ ಶ್ರೀಧರ್, ಶ್ರೀ ಕೃಷ್ಣ ಮಿತ್ರ ಮಂಡಳಿಯ ಅಧ್ಯಕ್ಷರಾದ ಪಿ. ಜಿ. ಪ್ರವೀಣ್, ಮಿತ್ರ ಮಂಡಳಿಯ ಹಲವು ಸದಸ್ಯರು ಮತ್ತು ನೂರಾರು ಭಕ್ತಾದಿಗಳು ಭಾಗವಹಿಸಿದ್ದರು.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…