ಮೈಸೂರು ನಗರ

ಮೈಸೂರು ವಿಶ್ವವಿದ್ಯಾನಿಲಯ : ಸಾಹಿತಿ ವರಹಳ್ಳಿ ಆನಂದ ಸಂಶೋಧಕ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ನೂತನ ಅಧ್ಯಕ್ಷರಾಗಿ ಯುವ ಸಾಹಿತಿ ವರಹಳ್ಳಿ ಆನಂದ ಚುನಾಯಿತರಾಗಿ ಆಯ್ಕೆಯಾಗಿದ್ದಾರೆ.

ಬುಧವಾರ ಮೈಸೂರು ವಿಶ್ವವಿದ್ಯಾನಿಲದಯ ಆವರಣದಲ್ಲಿ ನಡೆದ ಚುನಾವಣೆಯಲ್ಲಿ ವರಹಳ್ಳಿ ಆನಂದ 5 ಮತಗಳ ಅಂತರದಲ್ಲಿ ಪ್ರಬಲ ಪೈಪೋಟಿಯಲ್ಲಿ ಗೆದ್ದು ಸಂಭ್ರಮಿಸಿದರು.

ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಸೇರಿದ ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು ಜಿಲ್ಲೆಗಳ ವ್ಯಾಪ್ತಿಯ ವಿವಿಗಳಲ್ಲಿ ವಿವಿಧ ವಿಷಯಗಳಲ್ಲಿ ಸಂಶೋಧನೆ ನಡೆಸುತ್ತಿರುವ ಸಂಶೋಧಕ ಅಭ್ಯರ್ಥಿಗಳು ಮತ ಚಲಾಯಿಸಿದರು.

ಇದನ್ನು ಓದಿ:ಮೈಸೂರು| ಅಗ್ನಿ ಅವಘಡ: ವೃದ್ಧ ಸಜೀವ ದಹನ

539 ಒಟ್ಟು ಮತದಾನದಲ್ಲಿ ವರಹಳ್ಳಿ ಆನಂದ 144 ಮತಗಳನ್ನು ಪಡೆದು ವಿಜಯಶಾಲಿಯಾದರು. ಪ್ರಬಲ ಪೈಪೋಟಿ ನೀಡಿದ ಪರಾಜಿತ ಅಭ್ಯರ್ಥಿ ಮಹೇಶ್ 139 ಮತ ಪಡೆದು ಬೆರಳೆಣಿಕ ಮತ ಅಂತರದಲ್ಲಿ ಪರಭಾವಗೊಂಡರು.

ಉಳಿದಂತೆ ಮಲ್ಲೇಶ್ 57 ಮತ, ಅಭಿಷೇಕ್ 54, ಮದನ 51, ಲೋಕೇಶ್ 36, ರಾಜೇಶ್ ಚಾಕನಹಳ್ಳಿ 28, ನವೀನ್ 10, ಶೇಷಣ್ಣ 11 ಮತಗಳನ್ನು ಪಡೆದುಕೊಂಡರೆ 9 ನೋಟಾ ಮತ ಚಲಾವಣೆಗೊಂಡಿತು.

ಗೆಲುವಿನ ಸಂಭ್ರಮ
ತೀವ್ರ ಕುತೂಹಲದಿಂದ ಕೂಡಿದ್ದ ಚುನಾವಣೆಯಲ್ಲಿ ವರಹಳ್ಳಿ ಆನಂದ 5 ಮತಗಳ ಅಂತರದಲ್ಲಿ ವಿಜಯಶಾಲಿಯಾದರು ಎಂಬ ಸುದ್ದಿ ತಿಳಿದು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಿಸಿದರು. ತಮ್ಮ ನೆಚ್ಚಿನ ಅಭ್ಯರ್ಥಿಯನ್ನು ಹೆಗಲ ಮೇಲೆ ಎತ್ತಿಕೊಂಡು ಜೈಕಾರ ಹಾಕಿ ಕುಣಿದು ಕುಪ್ಪಳಿಸಿದರು.

ಇದನ್ನು ಓದಿ:ಎಸ್‌ಐಟಿ ತನಿಖೆಯಿಂದ ಧರ್ಮಸ್ಥಳದ ಮೇಲೆ ಅಂಟಿದ ಕಳಂಕ ದೂರ: ಶಾಸಕ ಹರೀಶ್‌ ಗೌಡ

ಹಣ, ಮದ್ಯದೊಳ
ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧನೆ ನಡೆಸುತ್ತಿರುವ ಅಭ್ಯರ್ಥಿಗಳಾದ ವಿವಿಯ ಸಂಶೋಧಕರ ಸಂಘ ಚುನಾವಣೆ ಆದರೂ ಹಣ, ಮದ್ಯದ ಹೊಳೆಯೂ ಹರಿದಿದೆ.

ಈಗಾಗಲೇ ದಲಿತ, ರೈತ, ಕಮ್ಯುನಿಸ್ಟ್ ಪಕ್ಷದ ಜನಪರ ಚಳವಳಿಗಳಲ್ಲಿ ಗುರುತಿಸಿಕೊಂಡಿರುವ ವರಹಳ್ಳಿ ಆನಂದ ‘ಬಂಗಾರಿ’ ಕಾದಂಬರಿಯ ಮೂಲಕ ಯುವ ಸಾಹಿತಿಯಾಗಿ ಪರಿಚಿತರಾಗಿದ್ದಾರೆ. ಪಿಎಚ್.ಡಿ ವಿದ್ಯಾರ್ಥಿಗಳಿಗೆ ಗೈಡ್‌ಗಳ ಕೊರತೆ ನೀಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿಗೆ ತೆರಳಿ ಮನವಿ ಕೊಟ್ಟು ಹೋರಾಟ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

51 mins ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

1 hour ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

3 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

4 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

4 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

5 hours ago