ಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ. ಆದರೆ, ಈ ಬಗ್ಗೆ ಕ್ಯಾರೆ ಎನ್ನದ ಸಿದ್ದರಾಮಯ್ಯ ಇಂದು ಮಧ್ಯಾಹ್ಯದಿಂದ ರಾತ್ರಿ 9;30ರವರೆಗೆ ಸುದೀರ್ಘ ಕೆಡಿಪಿ ಸಭೆ ನಡೆಸಿ, ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಮಾಧ್ಯಮಗಳಿಗೆ ಮುಡಾ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
17ಎ ಅಡಿ ತನಿಖೆ ನಡೆಸಿ ವರದಿ ನೀಡುವಂತೆ ಕೋರ್ಟ್ ಹೇಳಿದೆ. ಕೋರ್ಸ್ ಆದೇಶದನ್ವಯ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುತ್ತಾರೆ. ಜನಪ್ರತಿನಿಧಿಗಳ ಆದೇಶದ ಅನ್ವಯ ಲೋಕಾಯುಕ್ತರಿಂದ ತನಿಖೆ ನಡೆಸಿ 3ತಿಂಗಳಲ್ಲಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಆದೇಶಿಸಿದೆ ಎಂದು ಹೇಳಿದರು.
ದಸರಾ ಉದ್ಘಾಟನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅ.2ರಂದು ನಾನು ಮತ್ತೆ ಮೈಸೂರಿಗೆ ಬರುತ್ತೇನೆ. ಬಳಿಕ ಅ.3ರಂದು ಚಾಮುಂಡಿಬೆಟ್ಟದಲ್ಲಿ ಸಾಹಿತಿ ಹಂ.ಪ ನಾಗರಾಜಯ್ಯ ದಸರಾ ಉದ್ಘಾಟನೆ ಮಾಡುತ್ತಾರೆ. ಅಂದೇ ದಸರಾ ಕ್ರೀಡಾ ಕೂಟ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುವುದು. ವ್ಯವಸ್ಥಿತವಾಗಿ ದಸರಾ ಆಚರಣೆಗೆ ಸೂಚಿಸಿದ್ದೇನೆ. ಕಾನೂನು ಸುವ್ಯವಸ್ಥೆ ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶಿಸಿದ್ದೇನೆ ಎಂದಿದ್ದಾರೆ.
ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕರು ಅನಗತ್ಯ ಆರೋಪ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕಿಡಿಕಾರಿದ್ದಾರೆ.…
ಬೆಂಗಳೂರು: ಈ ಬಾರಿಯ ಹೊಸ ವರ್ಷಾಚರಣೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಸಾರ್ವಜನಿಕರು ಶಾಂತಿಯುತವಾಗಿ ಹೊಸ ವರ್ಷಾಚರಣೆಯನ್ನು ಸಂಭ್ರಮಿಸಿದ್ದಾರೆ ಎಂದು…
ಮೈಸೂರು: ಇಂದಿನಿಂದ 2025ರ ಹೊಸ ವರ್ಷ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶುಭಾಶಯ ಕೋರಿದ್ದಾರೆ.…
ಧರ್ಮ ಕೀರ್ತಿರಾಜ್ ಅಭಿನಯದ ‘ತಲ್ವಾರ್’ ಎಂಬ ಚಿತ್ರವು ಸುಮಾರು ಐದು ವರ್ಷಗಳ ಹಿಂದೆ ಪ್ರಾರಂಭವಾಗಿತ್ತು. ಚಿತ್ರದ ಮುಹೂರ್ತಕ್ಕೆ ದರ್ಶನ್ ಆಗಮಿಸಿ…
ಯೋಗರಾಜ್ ಭಟ್ ನಿರ್ದೇಶನದ ‘ಮನದ ಕಡಲು’ ಚಿತ್ರದ ಚಿತ್ರೀಕರಣ ಮುಗಿದಿದೆ. ಚಿತ್ರವು ಫೆಬ್ರವರಿಯಲ್ಲಿ ಬಿಡುಗಡೆ ಆಗುತ್ತಿದೆ. ಈ ಮಧ್ಯೆ, ಚಿತ್ರದ…
ಬೆಂಗಳೂರು: 2025ರ ಮೊದಲ ದಿನದಂದು ನೂತನ ವರ್ಷಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್…