ಮೈಸೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಸಹಾಯಕ ಸರ್ಫರಾಜ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, “ಈ ದಾಳಿ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಸರ್ಫರಾಜ್ ಅವರ ಕುಟುಂಬವು ಅವರ ತಂದೆ ಕಾಲದಿಂದಲೂ ಶ್ರೀಮಂತವಾಗಿದೆ. ಯಾಕೆ ದಾಳಿ ನಡೆದಿದೆ ಎಂಬುದು ನನಗೆ ಗೊತ್ತಿಲ್ಲ. ಮುಂದೇನು ಆಗುತ್ತದೆ ಎಂಬುದನ್ನು ನೋಡೋಣ” ಎಂದು ಹೇಳಿದ್ದಾರೆ.
ಇದೇ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ದೆಹಲಿ ಪ್ರವಾಸದ ಕುರಿತು ಪ್ರತಿಕ್ರಿಯಿಸಿದ ಸಚಿವ ಜಮೀರ್ ಅಹ್ಮದ್ ಖಾನ್, “ಡಿ.ಕೆ. ಶಿವಕುಮಾರ್ ಅವರು ತಮ್ಮ ಇಲಾಖೆಯ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಗೆ ಹೋಗಿದ್ದಾರೆ. ಅವರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಲ್ಲ” ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ:-ಸರ್ಫರಾಜ್ ಮನೆ ಮೇಲೆ ಲೋಕಾಯುಕ್ತ ದಾಳಿ ವಿಚಾರ: ಸಚಿವ ಜಮೀರ್ ಅಹಮ್ಮದ್ ಖಾನ್ ಪ್ರತಿಕ್ರಿಯೆ
ಇದಲ್ಲದೆ, ಶಾಸಕ ಇಕ್ಬಾಲ್ ಹುಸೇನ್ ಅವರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಜಮೀರ್ ಅಹ್ಮದ್ ಖಾನ್, “ಪ್ರತಿಯೊಬ್ಬರೂ ತಮ್ಮ ತಮ್ಮ ಅಭಿಪ್ರಾಯವನ್ನು ಹೇಳುತ್ತಾರೆ. ನಾನು ನನ್ನ ಅಭಿಪ್ರಾಯವನ್ನು ಹೇಳಿದ್ದೇನೆ. ಸಿದ್ದರಾಮಯ್ಯ ಅವರು ಈಗ ಮುಖ್ಯಮಂತ್ರಿ ಸ್ಥಾನದಲ್ಲಿದ್ದಾರೆ. 2028ರವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂಬುದು ನನ್ನ ಅಭಿಪ್ರಾಯ” ಎಂದು ಹೇಳಿದರು.
ಮುಂದುವರಿದು ಮಾತನಾಡಿದ ಅವರು, “ಅಂತಿಮವಾಗಿ ನಮ್ಮದು ಹೈಕಮಾಂಡ್ ಪಕ್ಷ. ಮುಖ್ಯಮಂತ್ರಿ ಬದಲಾವಣೆ ಮಾಡುವ ಅಧಿಕಾರ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗಿದೆ. ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ಮಾಡುವಂತಹ ಯಾವುದೇ ಸನ್ನಿವೇಶಗಳು ಇಲ್ಲ” ಎಂದು ತಿಳಿಸಿದರು.





