ಮೈಸೂರು: ಮುಡಾ ಪ್ರಕರಣದಲ್ಲಿ ಎ4 ಆರೋಪಿಯಾಗಿರುವ ದೇವರಾಜುಗೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು ಎರಡನೇ ಬಾರಿಗೆ ನೋಟಿಸ್ ನೀಡಿದ್ದಾರೆ.
ಈಗಾಗಲೇ ಎ4 ಆರೋಪಿಯಾಗಿರುವ ದೇವರಾಜು ಅವರನ್ನು ಲೋಕಾಯುಕ್ತ ಎಸ್‌ಪಿ ಟಿ.ಜೆ.ಉದೇಶ್ ಅವರ ನೇತೃತ್ವದ ತನಿಖಾ ತಂಡ ವಿಚಾರಣೆ ನಡೆಸಿದ್ದು, ಇದೀಗ ಮತ್ತೊಮ್ಮೆ ನಾಳೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ಮೈಸೂರು ಲೋಕಾಯುಕ್ತ ಅಧಿಕಾರಿಗಳು ವಿಶೇಷ ಜನ ಪ್ರತಿನಿಧಿಗಳ ಕೋರ್ಟ್ ಆದೇಶದ ಮೇರೆಗೆ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ, ಪಾರ್ವತಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಸ್ವಾಮಿ ಹಾಗೂ ದೇವರಾಜು ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಈ ಎಫ್‌ಐಆರ್ ಅನ್ವಯ ಲೋಕಾಯುಕ್ತ ಎಸ್‌ಪಿ ಟಿ.ಜೆ.ಉದೇಶ್ ಕುಮಾರ್ ಅವರ ನೇತೃತ್ವದ ತನಿಖಾ ತಂಡವೂ ಸಂಬಂಧಪಟ್ಟ ಆರೋಪಿಗಳನ್ನು ವಿಚಾರಣೆ ನಡೆಸಿತ್ತು. ಆದರೆ ಈಗ ಮತ್ತೊಮ್ಮೆ ಅಧಿಕ ಮಾಹಿತಿಗಾಗಿ ಲೋಕಾಯುಕ್ತ ಅಧಿಕಾರಿಗಳು ಸರ್ವೆ ನಂಬರ್.464ರ ನಿವೇಶನ ಮಾಲೀಕರಾಗಿರುವ ದೇವರಾಜುಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.