ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಆರೋಪ ಮಾಡಿದ್ದು, ಲೋಕಾಯುಕ್ತ ಸಂಸ್ಥೆಯೇ ಅಪರಾಧಿ ಸ್ಥಾನದಲ್ಲಿದೆ ಎಂದು ಕಿಡಿಕಾರಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ, ಲೋಕಾಯುಕ್ತ ಅಧಿಕಾರಿಗಳ ನಡೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಆದ್ದರಿಂದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.
ಜೂನ್.28ರಂದು ಲೋಕಾಯುಕ್ತ ಕಚೇರಿ ಮೇಲೆ ದಾಳಿ ನಡೆಸಲು ಸರ್ಚ್ ವಾರೆಂಟ್ ಜಾರಿಯಾಗಿದ್ದರೂ ಡಿವೈಎಸ್‌ಪಿ ಮಾಲತೇಶ್ ಎಸ್ ಕೆ ಆದೇಶವನ್ನು ಪಾಲಿಸಿಲ್ಲ. ದಾಳಿಗೆ ಮೊದಲೇ ವಿಷಯವನ್ನು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ಗೆ ತಿಳಿಸಲಾಗಿದೆ. ಅವರು ಬಂದು ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿದರು.