ಮೈಸೂರು: ಪಿಡಬ್ಲ್ಯೂಡಿ ಅಧಿಕಾರಿ ಜಿ.ಕೆ.ರೇವನ್ ಕುಮಾರ್ ಮನೆ ಹಾಗೂ ಕಚೇರಿಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಬಂದರು ಮತ್ತು ಒಳನಾಡಿನ ಜಲಮಾರ್ಗಗಳ ಪೂರೈಕೆ ಎಇ ಆಗಿ ಕಾರ್ಯ ನಿರ್ವಹಿಸುತ್ತಿರುವ ರೇವನ್ ಕುಮಾರ್ ಅವರ ಮೇಲೆ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪವಿದೆ.
ಈ ಹಿನ್ನೆಲೆಯಲ್ಲಿ ಅವರ ಮೈಸೂರಿನಲ್ಲಿರುವ ಕಚೇರಿ ಹಾಗೂ ಮಂಡ್ಯ ಜಿಲ್ಲೆಯಲ್ಲಿರುವ ಎರಡು ಮನೆಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಈ ಬಗ್ಗೆ ಲೋಕಾಯುಕ್ತ ಎಸ್ಪಿ ಉದೇಶ್ ಮಾಹಿತಿ ನೀಡಿದ್ದಾರೆ.





