ಮೈಸೂರು ನಗರ

ಮೈಸೂರು| ಪಹಲ್ಗಾಮ್‌ ಉಗ್ರರ ದಾಳಿ ಖಂಡಿಸಿ ಏಕಾಂಗಿ ಪ್ರತಿಭಟನೆ

ಮೈಸೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿರುವ ಪ್ರಕರಣ ಖಂಡಿಸಿ ಮೈಸೂರಿನ ವಿಜಯನಗರದ ನಿವಾಸಿ ಕಾರ್ತಿಕ್‌ ಎಂಬುವವರು ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ.

ನಗರದ ಜಿಲ್ಲಾ ನ್ಯಾಯಾಲಯದ ಮುಂಭಾಗ ಇರುವ ಮಹಾತ್ಮ ಗಾಂಧಿ ಪುತ್ಥಳಿ ಬಳಿ ಪ್ರತಿಭಟನೆ ಹಮ್ಮಿಕೊಂಡಿದ್ದ ಕಾರ್ತಿಕ್‌ ಬೆಳಿಗ್ಗೆ 9 ಗಂಟೆಯಿಂದಲೂ ನಿಲುಗಾಲಲ್ಲೇ ನಿಂತು ಉಗ್ರರ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಭಾರತದಲ್ಲಿ ಭಾರತೀಯರಿಗೆ ರಕ್ಷಣೆ ಎಲ್ಲಿ.? ಎಂಬ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸಿದ ಕಾರ್ತಿಕ್‌, ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತು ಹಾಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ದಿಟ್ಟ ಕ್ರಮ ತೆಗೆದುಕೊಳ್ಳಬೇಕು. ದೇಶದ ರಕ್ಷಣೆಗೆ ಪ್ರತಿಯೊಬ್ಬ ಭಾರತೀಯನು ಜಾತ್ಯಾತೀತ, ಧರ್ಮಾತೀತವಾಗಿ ಒಗ್ಗಟ್ಟಾಗಬೇಕು. ಪಾಪಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಬೇಕು ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಸರಸ್ವತಿಪುರಂ ಕಲ್ಯಾಣಿಗೆ ಪುನಶ್ಚೇತನ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಮೈಸೂರು ಸಂಸ್ಥಾನದ ಕೊನೆಯ ಅರಸ, ದೇಶ ಸ್ವತಂತ್ರಗೊಂಡ ನಂತರ ರಾಜ ಪ್ರಮುಖರಾಗಿ ಸೇವೆ ಸಲ್ಲಿಸಿದ್ದ ಜಯಚಾಮರಾಜ ಒಡೆಯರ್…

5 mins ago

ದ್ರಾವಿಡ ಚಳವಳಿಗಾರ ಡಾ.ಕೆ.ವೀರಮಣಿ ಅವರಿಗೆ ಬೋಧಿ ವೃಕ್ಷ ಪ್ರಶಸ್ತಿ

ದ್ರಾವಿಡ ಚಳವಳಿಗಾರ ಡಾ.ಕೆ.ವೀರಮಣಿ ಅವರಿಗೆ ಬೋಧಿ ವೃಕ್ಷ ಪ್ರಶಸ್ತಿ   ಪೆರಿಯಾರ್ ರಾಮಸ್ವಾಮಿ ಅವರ ಸೈದ್ಧಾಂತಿಕ ಉತ್ತರಾಧಿಕಾರಿ ಬೆಂಗಳೂರು: ಮೌಢ್ಯ…

18 mins ago

ಮಂಗಳಮುಖಿ ವೇಷ; ಲೈಂಗಿಕ ಪಾಶ

೫ ತಿಂಗಳ ಹಿಂದೆ ಯುವಕನನ್ನು ಮೈಸೂರಿನಿಂದ ಅಪಹರಿಸಿ ಕರೆದೊಯ್ದಿದ್ದ ತಂಡ ಮಂಗಳೂರಿನಿಂದ ತಪ್ಪಿಸಿಕೊಂಡು ಬಂದು ಲಷ್ಕರ್‌ ಠಾಣೆಗೆ ದೂರು  ಮೈಸೂರು:…

23 mins ago

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

12 hours ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

12 hours ago