Love Dispute Turns Violent: Youth Stabs and Kills Teacher
ಮೈಸೂರು: ಪ್ರೀತಿ ವಿಚಾರಕ್ಕೆ ಕಿರಿಕ್ ನಡೆದ ಪರಿಣಾಮ ಶಿಕ್ಷಕಿಯ ಮೇಲೆ ಯುವಕನೋರ್ವ ಚಾಕುವಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಅಶೋಕಪುರಂನಲ್ಲಿ ನಡೆದಿದೆ.
ಪಾಂಡವಪುರದ ಎಲೆಕೆರೆ ಹ್ಯಾಂಡ್‌ಪೋಸ್ಟ್ ಮೂಲದ ಪೂರ್ಣಿಮಾ ಎಂಬುವವರೇ ಹತ್ಯೆಯಾದ ಮಹಿಳೆಯಾಗಿದ್ದು, ಕ್ಯಾತನಹಳ್ಳಿ ಗ್ರಾಮದ ಅಭಿಷೇಕ್ ಎಂಬುವವನೇ ಹತ್ಯೆ ಮಾಡಿರುವ ಆರೋಪಿಯಾಗಿದ್ದಾನೆ.
ಶುಕ್ರವಾರ ಆರೋಪಿ ಅಭಿಷೇಕ್ ಶಿಕ್ಷಕಿಗೆ ಚಾಕು ಇರಿದು ಪರಾರಿಯಾಗಿದ್ದ. ಚಾಕು ಇರಿತದಿಂದ ಗಾಯಗೊಂಡಿದ್ದ ಶಿಕ್ಷಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಮೃತಪಟ್ಟಿದ್ದಾರೆ.
ಪ್ರೀತಿ ವಿಚಾರದಲ್ಲಿ ಕೋಪದಿಂದ ಯುವಕ ಮಹಿಳೆ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ಎಂದು ತಿಳಿದುಬಂದಿದ್ದು, ಆರೋಪಿ ಅಭಿಷೇಕ್ ಈಗ ಪೊಲೀಸರ ಅತಿಥಿಯಾಗಿದ್ದಾನೆ.
ಮೈಸೂರು: ರಾಜ್ಯದ ಉಭಯ ಸದನದಲ್ಲಿ ನಿನ್ನೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸರ್ಕಾರದ ಭಾಷಣವನ್ನು ಮೊಟಕುಗೊಳಿಸಿ ಹೊರ ನಡೆದ ನಡೆಯನ್ನು…
ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ ತೀರ್ಪು ನೀಡಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು…
ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾದಪ್ಪನ ದರ್ಶನ ಪಡೆದು ವಾಪಸ್ ಬರುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿಯಾದ…
ನಂಜನಗೂಡು: ಸಿಸಿ ಕ್ಯಾಮರಾ ಸುಳಿವು ಆಧರಿಸಿ ಇಬ್ಬರು ಜಾನುವಾರು ಕಳ್ಳರನ್ನು ಬಂಧಿಸುವಲ್ಲಿ ನಂಜನಗೂಡು ಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆ…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಭಕ್ತನ ಮೇಲೆ ಚಿರತೆ…
ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ…