M G Mahesh Reaction On KPCC spokesperson M Lakshman Statement
ಮೈಸೂರು: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ಗೆ ಐದು ಬಾರಿ ಚುನಾವಣೆಯಲ್ಲಿ ಸೋತು ತಲೆಕೆಟ್ಟಿದ್ದು, ಹುಚ್ಚು ಹಿಡಿದಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ಎಂ.ಜಿ.ಮಹೇಶ್ ಕಿಡಿಕಾರಿದ್ದಾರೆ.
ಪಹಲ್ಗಾಮ್ ಉಗ್ರರ ದಾಳಿಗೆ ಆಂತರಿಕ ಭದ್ರತಾ ವೈಫಲ್ಯ ಕಾರಣ. ಇದಕ್ಕೆ ಕೇಂದ್ರ ಬಿಜೆಪಿಯೂ ಕಾರಣ. ಈ ಹಿನ್ನೆಲೆಯಲ್ಲಿ ಘಟನೆಯ ನೈತಿಕ ಹೊಣೆ ಹೊತ್ತು ಬಿಜೆಪಿ ನಾಯಕರು ರಾಜೀನಾಮೆ ನೀಡಿ ಹೊರ ಬರಬೇಕು ಎಂದು ಹೊರಬೇಕು ಎಂ.ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಾಜ್ಯ ವಕ್ತಾರ ಎಂ.ಜಿ.ಮಹೇಶ್ ಅವರು, ಲಕ್ಷ್ಮಣ್ ಚುನಾವಣೆಗಳಲ್ಲಿ ಐದಾರು ಬಾರಿ ಸೋತು ಹುಚ್ಚನಂತೆ ಮಾತಾಡುತ್ತಾನೆ. ಆತನ ಮೇಲೆ ದೇಶ ದ್ರೋಹದ ಕೇಸ್ ದಾಖಲು ಮಾಡುತ್ತೇವೆ. ದೇಶ ಉಗ್ರರ ದಾಳಿಯಿಂದ ದುಃಖದಲ್ಲಿರುವಾಗ ಈ ರೀತಿ ಹುಚ್ಚನಂತೆ ಹೇಳಿಕೆ ಕೊಡುವುದು ಖಂಡನೀಯ. ಈ ಕೂಡಲೇ ಪೋಲಿಸರು ಅವನ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಇನ್ನು ದೇಶ ಒಂದು ಕಡೆ ಪಾಕಿಸ್ತಾನದ ಮೇಲೆ ಪ್ರತಿಕಾರ ತೀರಿಸಿಕೊಳ್ಳುವ ಕೆಲಸ ಮಾಡುತ್ತಿದೆ. ಯಾವುದೇ ಕಾರಣಕ್ಕೂ ಪಾಪಿಗಳನ್ನು ಬಿಡಬಾರದು. ಅವರಿಗೆ ಪ್ರಧಾನಿ ಮೋದಿ ಜೀ ತಕ್ಕ ಪಾಠ ಕಲಿಸುತ್ತಾರೆ. ಈ ಮೂಲಕ ಪ್ರತಿಕಾರ ತೀರಿಸಿಕೊಳ್ಳುತ್ತಾರೆ. ಈಗಾಗಲೇ ರಾಜತಾಂತ್ರಿಕ ವ್ಯವಸ್ಥೆ ಮೂಲಕ ಪಾಕಿಸ್ತಾನಕ್ಕೆ ಬುದ್ಧಿ ಕಲಿಸುವ ನಿಟ್ಟಿನಲ್ಲಿ ಎಲ್ಲಾ ಪಾಕಿಸ್ತಾನದ ಪ್ರಜೆಗಳನ್ನು ಗಡಿಪಾರು ಮಾಡುವ ನಿರ್ಧಾರವನ್ನ ಕೇಂದ್ರ ಸರ್ಕಾರ ತೆಗೆದುಕೊಂಡಿದೆ. ಇದು ಸ್ವಾಗತಾರ್ಹ ವಿಷಯ ಎಂದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…