ಮೈಸೂರು: ಕಾಂಗ್ರೆಸ್‌ನ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಬಿಜೆಪಿ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಾರೆ. ಅವರು ಮಾಡುವ ಆರೋಪಗಳಲ್ಲಿ ಯಾವುದೇ ಉರುಳಿಲ್ಲ. ಅವರ ಆರೋಪಗಳು ಕೇವಲ ಮೈಸೂರಿಗೆ ಮಾತ್ರ ಸೀಮಿತ ಎಂದು ಮೈಸೂರು ಬಿಜೆಪಿ ವಕ್ತಾರ ಮೋಹನ್ ವಾಗ್ದಾಳಿ ನಡೆಸಿದ್ದಾರೆ.
ಇಂದು (ಫೆ.4) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಬಜೆಟ್ ಜನಪರವಾಗಿದೆ. ಅದನ್ನು ಸಹಿಸಲಾರದೆ ಕಾಂಗ್ರೆಸ್ ಪಕ್ಷದ ನಾಯಕರು ಅಪಪ್ರಚಾರ ಮಾಡುತ್ತಾರೆ. ಎಂ. ಲಕ್ಷ್ಮಣ್ ಅವರ ಆರೋಪಗಳಲ್ಲಿ ಸತ್ಯಾಂಶವಿರುವುದಿಲ್ಲ. ಅವರ ಆರೋಪಗಳು ಕೇವಲ ಮೈಸೂರಿಗೆ ಮಾತ್ರ ಸೀಮಿತ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ ಕಾಂಗ್ರೆಸ್ ಸಂಸದರು ಏನು ಮಾಡಿದ್ದಾರೆಂದು ತಿಳಿಸಲಿ. ಮೈಸೂರು-ಬೆಂಗಳೂರು ಜೋಡಿ ರೈಲು ಮಾರ್ಗ ಪೂರ್ಣಗೊಳ್ಳಲು ಕಾರಣ ಪ್ರತಾಪ ಸಿಂಹ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಮೈಸೂರು ಜಿಲ್ಲೆಗೆ ಸಾಕಷ್ಟು ಅನುದಾನ ಬಂದಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದವರು 60 ವರ್ಷದಲ್ಲಿ ಮಾಡಲಾಗದ್ದನ್ನು ಬಿಜೆಪಿ ಕೇವಲ 10 ವರ್ಷಗಳಲ್ಲಿ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ದೇಶದ ಸಮಗ್ರ ಅಭಿವೃದ್ದಿ ಆಗಿದೆ. ಮುಂದೆನು ಅಗುತ್ತದೆ ಎಂದು ಹೇಳಿದರು.