ಮೈಸೂರು ನಗರ

ಎಂ.ಲಕ್ಷ್ಮಣ್‌ ಮೈಸೂರಿಗೆ ಮಾತ್ರ ಸೀಮಿತ: ಬಿಜೆಪಿ ವಕ್ತಾರ ಮೋಹನ್‌

ಮೈಸೂರು: ಕಾಂಗ್ರೆಸ್‌ನ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್‌ ಬಿಜೆಪಿ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಾರೆ. ಅವರು ಮಾಡುವ ಆರೋಪಗಳಲ್ಲಿ ಯಾವುದೇ ಉರುಳಿಲ್ಲ. ಅವರ ಆರೋಪಗಳು ಕೇವಲ ಮೈಸೂರಿಗೆ ಮಾತ್ರ ಸೀಮಿತ ಎಂದು ಮೈಸೂರು ಬಿಜೆಪಿ ವಕ್ತಾರ ಮೋಹನ್‌ ವಾಗ್ದಾಳಿ ನಡೆಸಿದ್ದಾರೆ.

ಇಂದು (ಫೆ.4) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಬಜೆಟ್‌ ಜನಪರವಾಗಿದೆ. ಅದನ್ನು ಸಹಿಸಲಾರದೆ ಕಾಂಗ್ರೆಸ್‌ ಪಕ್ಷದ ನಾಯಕರು ಅಪಪ್ರಚಾರ ಮಾಡುತ್ತಾರೆ. ಎಂ. ಲಕ್ಷ್ಮಣ್‌ ಅವರ ಆರೋಪಗಳಲ್ಲಿ ಸತ್ಯಾಂಶವಿರುವುದಿಲ್ಲ. ಅವರ ಆರೋಪಗಳು ಕೇವಲ ಮೈಸೂರಿಗೆ ಮಾತ್ರ ಸೀಮಿತ ಎಂದು ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದರು.

ಕೇಂದ್ರದಲ್ಲಿ ಕಾಂಗ್ರೆಸ್‌ ಸರ್ಕಾರವಿದ್ದಾಗ ಕಾಂಗ್ರೆಸ್‌ ಸಂಸದರು ಏನು ಮಾಡಿದ್ದಾರೆಂದು ತಿಳಿಸಲಿ. ಮೈಸೂರು-ಬೆಂಗಳೂರು ಜೋಡಿ ರೈಲು ಮಾರ್ಗ ಪೂರ್ಣಗೊಳ್ಳಲು ಕಾರಣ ಪ್ರತಾಪ ಸಿಂಹ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಮೈಸೂರು ಜಿಲ್ಲೆಗೆ ಸಾಕಷ್ಟು ಅನುದಾನ ಬಂದಿದೆ ಎಂದು ತಿಳಿಸಿದರು.

ಕಾಂಗ್ರೆಸ್‌ ಪಕ್ಷದವರು 60 ವರ್ಷದಲ್ಲಿ ಮಾಡಲಾಗದ್ದನ್ನು ಬಿಜೆಪಿ ಕೇವಲ 10 ವರ್ಷಗಳಲ್ಲಿ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ದೇಶದ ಸಮಗ್ರ ಅಭಿವೃದ್ದಿ ಆಗಿದೆ. ಮುಂದೆನು ಅಗುತ್ತದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

1 hour ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

1 hour ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

2 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

2 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

2 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

2 hours ago