ಮೈಸೂರು ನಗರ

ಪ್ರತಾಪ್‌ ಸಿಂಹ ವಿರುದ್ಧ ಕೇಸ್‌ ದಾಖಲಿಸಬೇಕು: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆಗ್ರಹ

ಮೈಸೂರು: ಪತ್ರಕರ್ತನ ಮೇಲೆ ನಿಂದನೆ ಮಾಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಕೇಸ್‌ ದಾಖಲಿಸಬೇಕು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆಗ್ರಹಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪತ್ರಕರ್ತನ ಮೇಲೆ ಪ್ರತಾಪ್‌ ಸಿಂಹ ನಿಂದಿಸಿರುವ ಬಗ್ಗೆ ಪತ್ರಕರ್ತರ ಸಂಘದ ಅಧ್ಯಕ್ಷ ಕೆ ದೀಪಕ್ ನೀಡಿರುವ ಹೇಳಿಕೆಗೆ ನಮ್ಮ ಬೆಂಬಲವಿದೆ. ಮುಂದಿನ ದಿನಗಳಲ್ಲಿ ಉಳಿದ ಪತ್ರಕರ್ತರಿಗೂ ಇದೇ ಪರಿಸ್ಥಿತಿ ಆಗಬಹುದು. ದಿನ ಬೆಳಗಾದರೆ ಸಿದ್ದರಾಮಯ್ಯ, ಡಿಕೆಶಿ ಬಗ್ಗೆ ಮಾತನಾಡುವುದೇ ಪ್ರತಾಪ್‌ ಸಿಂಹನ ಕೆಲಸ. ಈತನ ಬಗ್ಗೆ ಕೇಸ್ ದಾಖಲಿಸಬೇಕು. ಈ ಬಗ್ಗೆ ಜಿಲ್ಲಾ ಪತ್ರಕರ್ತರ ಸಂಘ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಇನ್ನು ಮದ್ದೂರಿನಲ್ಲಿ ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನೆ ಮೆರವಣಿಗೆಯಲ್ಲಿ ಬಿಜೆಪಿ ನಾಯಕರು ಭಾಗಿಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬಿಜೆಪಿ ಹೆಸರೇಳಲು ಯಾರು ಇಲ್ಲ, ಅದಕ್ಕಾಗಿ ಬಿಜೆಪಿ ಮದ್ದೂರಿಗೆ ಲಗ್ಗೆಯಿಟ್ಟಿದೆ. ಜೆಡಿಎಸ್ ಒಳಗೆ ಬಿಟ್ಟಿಕೊಂಡಿದ್ದಾರೆ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ತಲೆ ಎತ್ತಬೇಕಾದರೆ ಜೆಡಿಎಸ್ ಕಾರಣ.
ಮಂತ್ರಿ ಕೊಟ್ಟಿದ್ದಾರೆಂದು ಎಚ್.ಡಿ.ಕುಮಾರಸ್ವಾಮಿ ಜೆಡಿಎಸ್‌ನ್ನು ಬಿಜೆಪಿಗೆ ಅಡವಿಟ್ಟಿದ್ದಾರೆ. ಹಳೇ ಮೈಸೂರು ಭಾಗವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಬಿಜೆಪಿ ಪ್ಲಾನ್ ಮಾಡಿದೆ. ಮದ್ದೂರು ಪ್ರಕರಣವನ್ನು NIAಗೆ ವಹಿಸಿ. ಬೇರೆ ಪ್ರಕರಣವನ್ನು NIAಗೆ ವಹಿಸಿ ಎನ್ನುವ ಬಿಜೆಪಿಗರು ಮದ್ದೂರು ಪ್ರಕರಣವನ್ನೇಕೆ NIAಗೆ ವಹಿಸುವ ಬಗ್ಗೆ ಮಾತನಾಡಲ್ಲ ಎಂದು ಪ್ರಶ್ನೆ ಮಾಡಿದರು.

ಇನ್ನು ಮದ್ದೂರು ಗಲಾಟೆಯಲ್ಲಿ ಇದ್ದ ಜ್ಯೋತಿ ಎಂಬ ಹುಡುಗಿಗೆ ಮದ್ದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಟಿಕೆಟ್ ನೀಡುತ್ತಾರಂತೆ. ಬಿಜೆಪಿಯವರು ಆಕೆಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ನೀಡುವವರೆಗೂ ಹೋಗಿದ್ದರು. ಆದರೆ ಆಕೆಯ ಚಲನವಲನ ನೋಡಿ ಹಿಂದೆ ಸರಿದಿದ್ದಾರೆ. ಈ ಬಗ್ಗೆ ಆಕೆ ತನ್ನ ಇನ್ಸ್‌ಸ್ಟಾಗ್ರಾಮ್‌ನಲ್ಲಿ ಎಲ್ಲವನ್ನು ಹೇಳಿಕೊಂಡಿದ್ದಾಳೆ. ಇದನ್ನು ನೋಡಿ ಬಿಜೆಪಿ ಸುಮ್ಮನಾಗಿದೆ. ಜ್ಯೋತಿ ಎಂಬ ಹುಡುಗಿ ಮುಸ್ಲಿಂಮರನ್ನು ಬೈದು ನಿಂದಿಸಿದ್ದಾಳೆ ಎಂದು ಕಿಡಿಕಾರಿದರು.

ಇನ್ನು ಮದ್ದೂರು ಗಲಾಟೆ ಕುರಿತು ಮಾತನಾಡಿದ ಅವರು, 24 ಮಂದಿಯು ಕಲ್ಲು ಹೊಡೆದಿದ್ದಾರಾ?. ಯಾವ ಆಧಾರದ ಮೇಲೆ ಅವರನ್ನೆಲ್ಲಾ ಅರೆಸ್ಟ್ ಮಾಡಿದ್ದೀರಾ ತಿಳಿಸಿ. ಬಿಜೆಪಿ ಓಲೈಕೆಗೆ ಸಿಕ್ಕ ಸಿಕ್ಕವರನ್ನು ಅರೆಸ್ಟ್ ಮಾಡಿದ್ರೆ ಹೇಗೆ. ಪೊಲೀಸರು ಒಳ್ಳೆಯ ಕೆಲಸ ಮಾಡಿದ್ದಾರೆ. ಪೊಲೀಸರು ಪ್ರಯತ್ನ ಮೀರಿ ಒಳ್ಳೆ ಕೆಲಸ ಮಾಡಿದ್ದಾರೆ. ಆದರೆ 24 ಜನರು ಕಲ್ಲು ಹೊಡೆದಿದ್ದಾರಾ? ಎಂದು ಪ್ರಶ್ನಿಸಿದ ಅವರು, ಈ ಬಗ್ಗೆ ಗೊತ್ತಾಗಬೇಕಿದೆ. ರಾಮ್ ರಹೀಮ್ ನಗರದಲ್ಲಿ 144 ಸೆಕ್ಷನ್ ಜಾರಿ ಇತ್ತು. ಹೀಗಿದ್ದರು ಹೇಗೆ ಹೋದರು. ಉದ್ದೇಶಪೂರ್ವಕವಾಗಿ ಗಲಾಟೆ ನಡೆದಿದೆ. ಬಿಜೆಪಿಯವರೇ ಕಲ್ಲು ತೂರಾಟ ಮಾಡಿರಬೇಕು. ಮಸೀದಿಯಿಂದ ಕಲ್ಲು ತೂರಾಟವಾಗಿಲ್ಲ ಎಂದು ಐಜಿಪಿ ಸ್ಪಷ್ಟನೆ ನೀಡಿದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

4 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

6 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

7 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

8 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

9 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

9 hours ago