Mysore
20
overcast clouds

Social Media

ಶನಿವಾರ, 08 ಆಗಸ್ಟ್ 2026
Light
Dark

ಬಿಜೆಪಿಯವರು ಎಚ್‌ಡಿಕೆ ಭೂ ಒತ್ತುವರಿ ಬಗ್ಗೆ ಯಾಕೆ ಚಕಾರ ಎತ್ತುತ್ತಿಲ್ಲ: ಎಂ.ಲಕ್ಷ್ಮಣ್‌ ಪ್ರಶ್ನೆ

ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಭೂ ಒತ್ತುವರಿ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಯಾಕೆ ಚಕಾರ ಎತ್ತುತ್ತಿಲ್ಲ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಕಿಡಿಕಾರಿದ್ದಾರೆ.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಿಡದಿಯ ಕೇತುಗಾನಹಳ್ಳಿ ಸರ್ಕಾರಿ ಜಮೀನು ಒತ್ತುವರಿ ವಿಚಾರ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಅವರು, ಎಚ್‌ಡಿಕೆ ಅವರ ಕುಟುಂಬ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ದಾಖಲೆ ಹೇಳುತ್ತಿದೆ. ಆದರೆ ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿದ್ದಾರೆ. ಆದರೆ ಎಚ್‌ಡಿಕೆ ಅವರ ಈ ವಿಚಾರದಲ್ಲಿ ಬಿಜೆಪಿಯವರು ಯಾಕೆ ಏನನ್ನೂ ಮಾತನಾಡುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.

ಎಚ್‌ಡಿಕೆ ಅವರಿಗೆ ನಾನೊಂದು ಪ್ರಶ್ನೆ ಕೇಳುತ್ತೇನೆ. 2004, 2006, 2008 ಹಾಗೂ 2009ರಲ್ಲಿ ನೀವೇ ಸರ್ಕಾರದ ಭಾಗವಾಗಿದ್ದೀರಿ. ಯಾವ ಜಮೀನನ್ನೂ ಒತ್ಯುವರಿ ಮಾಡಿಕೊಂಡಿಲ್ಲ ಎನ್ನುವುದಕ್ಕೆ ಒಂದು ದಾಖಲೆ ತೋರಿಸಿ. ಬಿಜೆಪಿಯವರಿಗೆ ಮಾನ ಮರ್ಯಾದೆ ಇದ್ರೆ ಈ ವಿಚಾರದ ಬಗ್ಗೆ ಮಾತನಾಡಬೇಕಿತ್ತು ಎಂದು ಸವಾಲು ಹಾಕಿದರು.

 

Tags:
error: Content is protected !!