ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಭೂ ಒತ್ತುವರಿ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಯಾಕೆ ಚಕಾರ ಎತ್ತುತ್ತಿಲ್ಲ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಿಡದಿಯ ಕೇತುಗಾನಹಳ್ಳಿ ಸರ್ಕಾರಿ ಜಮೀನು ಒತ್ತುವರಿ ವಿಚಾರ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು, ಎಚ್‌ಡಿಕೆ ಅವರ ಕುಟುಂಬ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ದಾಖಲೆ ಹೇಳುತ್ತಿದೆ. ಆದರೆ ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿದ್ದಾರೆ. ಆದರೆ ಎಚ್‌ಡಿಕೆ ಅವರ ಈ ವಿಚಾರದಲ್ಲಿ ಬಿಜೆಪಿಯವರು ಯಾಕೆ ಏನನ್ನೂ ಮಾತನಾಡುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.
ಎಚ್‌ಡಿಕೆ ಅವರಿಗೆ ನಾನೊಂದು ಪ್ರಶ್ನೆ ಕೇಳುತ್ತೇನೆ. 2004, 2006, 2008 ಹಾಗೂ 2009ರಲ್ಲಿ ನೀವೇ ಸರ್ಕಾರದ ಭಾಗವಾಗಿದ್ದೀರಿ. ಯಾವ ಜಮೀನನ್ನೂ ಒತ್ಯುವರಿ ಮಾಡಿಕೊಂಡಿಲ್ಲ ಎನ್ನುವುದಕ್ಕೆ ಒಂದು ದಾಖಲೆ ತೋರಿಸಿ. ಬಿಜೆಪಿಯವರಿಗೆ ಮಾನ ಮರ್ಯಾದೆ ಇದ್ರೆ ಈ ವಿಚಾರದ ಬಗ್ಗೆ ಮಾತನಾಡಬೇಕಿತ್ತು ಎಂದು ಸವಾಲು ಹಾಕಿದರು.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…