ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅರಮನೆ ಆಡಳಿತ ಮಂಡಳಿ ವತಿಯಿಂದ ಡಿಸೆಂಬರ್.21ರಂದು ಮಾಗಿ ಉತ್ಸವವನ್ನು ಆಯೋಜನೆ ಮಾಡಲಾಗಿದೆ.
ಮೈಸೂರು ಅರಮನೆ ಆವರಣದಲ್ಲಿ ಮಾಗಿ ಉತ್ಸವ ನಡೆಯಲಿದ್ದು, ಇದಕ್ಕೆ ಡಿಸೆಂಬರ್.21ರಂದು ಚಾಲನೆ ಸಿಗಲಿದೆ.
ಮಾಗಿ ಉತ್ಸವದ ಹಿನ್ನೆಲೆಯಲ್ಲಿ ಅರಮನೆ ಆಡಳಿತ ಮಂಡಳಿ ಸಕಲ ಸಿದ್ಧತೆ ಕೈಗೊಂಡಿದ್ದು, ಈಗಾಗಲೇ ವಿವಿಧ ಬಗೆಯ ಹೂವಿನ ಕುಂಡಗಳನ್ನು ನಿರ್ಮಾಣ ಮಾಡಲಾಗಿದೆ.
ಇನ್ನು ಮಾಗಿ ಉತ್ಸವಕ್ಕೆ ಅರಮನೆ ಆವರಣದ ಪಾರ್ಕ್‌ನಲ್ಲಿ ವಿವಿಧ ಬಗೆತ ಕಲಾಕೃತಿಗಳನ್ನು ಸಹ ನಿರ್ಮಾಣ ಮಾಡಲಾಗಿದೆ.
ಕಲಾಕೃತಿಗಳಲ್ಲಿ ಪ್ರಮುಖವಾಗಿ ನಂಜನಗೂಡು ಶ್ರೀಕಂಠೇಶ್ವರ ದೇವಾಲಯ, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ, ಮುಮ್ಮಡಿ ಕೃಷ್ಣರಾಜ ಒಡೆಯರ್ ಪ್ರತಿಮೆ, ಬಂಡೀಪುರ ಅರಣ್ಯ ಸೇರಿದಂತೆ ಹಲವು ಪ್ರಾಣಿ ಹಾಗೂ ಪಕ್ಷಿಗಳ ಕಲಾಕೃತಿ ನಿರ್ಮಾಣವಾಗಿದೆ.
ಮಾಗಿ ಉತ್ಸವಕ್ಕೆ ನೆರೆಯ ರಾಜ್ಯಗಳು ಹಾಗೂ ಇತರೆ ದೇಶಗಳಿಂದಲೂ ವಿವಿಧ ವಿವಿಧ ಬಗೆಯ ಹೂವುಗಳನ್ನು ಖರೀದಿ ಮಾಡಲಾಗಿದೆ.
ಮೈಸೂರಿನ ಉಮಾಶಂಕರ್ ನೇತೃತ್ವದಲ್ಲಿ ಕಲಾ ಕೃತಿಗಳು ನಿರ್ಮಾಣವಾಗುತ್ತಿದ್ದು, ಕಾರ್ಮಿಕರು ಕಲಾಕೃತಿಗಳಿಗೆ ಅಂತಿಮ ಸ್ಪರ್ಶ ನೀಡುತ್ತಿದ್ದಾರೆ.
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…
ಬೆಂಗಳೂರು: ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿದರು. ಈ…
ಕೇರಳ: ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ…
ಮಂಡ್ಯ: ಕಳೆದ ಬಾರಿಗಿಂತ ಈ ಬಾರಿ ವಿಶೇಷವಾಗಿ 2 ಲಕ್ಷಕ್ಕೂ ಅಧಿಕ ಹೂಗಳನ್ನು ಬಳಿಸಿ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಮಾಡಲಾಗಿದೆ…
ಮೈಸೂರು: ಅಪಾರ್ಟ್‌ಮೆಂಟ್‌ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್ ರಸ್ತೆಯಲ್ಲಿರುವ…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6…